ಭಾರತ-ಜೋರ್ಡಾನ್ ಸಂಬಂಧಗಳು ಬಲಗೊಳ್ಳುತ್ತಿವೆ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒತ್ತು: ಮೋದಿ

ಭಾರತ-ಜೋರ್ಡಾನ್ ಸಂಬಂಧಗಳು ಬಲಗೊಳ್ಳುತ್ತಿವೆ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒತ್ತು: ಮೋದಿ


ಜೋರ್ಡಾನ್, ಡಿಸೆಂಬರ್ 16: ಪ್ರಧಾನಿ ನರೇಂದ್ರ ಮೋದಿ(ನರೇಂದ್ರ ಮೋದಿ) ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ, ಭಾರತ ಮತ್ತು ಜೋರ್ಡಾನ್ ನಡುವೆ ಇಂಧನ, ನೀರು ನಿರ್ವಹಣೆ, ಸಂಸ್ಕೃತಿ, ಪರಂಪರೆ ಸಂರಕ್ಷಣೆ ಮತ್ತು ಡಿಜಿಟಲ್ ಸಹಕಾರದಂತಹ ಕ್ಷೇತ್ರಗಳನ್ನು ಒಳಗೊಂಡಿರುವ ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಈ ಒಪ್ಪಂದಗಳು ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್ ಭೇಟಿಯ ಸಂದರ್ಭದಲ್ಲಿ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಪ್ರಧಾನಿ ಮೋದಿ ಅವರು ಅಮ್ಮನ ಹುಸೇನಿಯಾ ಅರಮನೆಗೆ ಆಗಮಿಸಿದಾಗ, ರಾಜ ಅಬ್ದುಲ್ಲಾ II ಅವರು ಮೋದಿಗೆ ಆತ್ಮೀಯ ಸ್ವಾಗತ.

ಪ್ರಧಾನಿ ಮೋದಿ ಪೋಸ್ಟ್

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರ ಅಮ್ಮನ ಹೋಟೆಲ್‌ನಲ್ಲಿ ಭಾರತೀಯ ಸಮುದಾಯದ ಸದಸ್ಯರು ಸಹ ಆತ್ಮೀಯವಾಗಿ ಸ್ವಾಗತಿಸಿದರು. ಸಭೆಯ ಸಮಯದಲ್ಲಿ, ಪ್ರಧಾನಿ ಮೋದಿ ಭಯೋತ್ಪಾದನೆಯನ್ನು ಜಂಟಿಯಾಗಿ ಎದುರಿಸುವ ಬಗ್ಗೆ ವಿಶೇಷ ಒತ್ತು.

ಮತ್ತಷ್ಟು ಓದಿ: ಜೋರ್ಡಾನ್ ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

ಗಾಜಾದಲ್ಲಿ ಜೋರ್ಡಾನ್‌ನ ಸಕ್ರಿಯ ಮತ್ತು ಸಕಾರಾತ್ಮಕ ಪಾತ್ರವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಭರವಸೆ ನೀಡಿದ್ದಾರೆ. ಪೆಟ್ರಾ ಮತ್ತು ಎಲ್ಲೋರಾ ನಡುವಿನ ಅವಳಿ ಒಪ್ಪಂದವು ಪ್ರವಾಸೋದ್ಯಮ ಮತ್ತು ಶೈಕ್ಷಣಿಕ ವಿನಿಮಯಕ್ಕೆ ಹೊಸ ಮಾರ್ಗಗಳನ್ನು ತೆರೆಯುತ್ತದೆ ಎಂದು ಮೋದಿ ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *