
ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನ ಟಿವಿ9 ನೆಟ್ ವರ್ಕ್ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಜೊತೆಗೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿದೆ. ಆದರೆ ಕಾಂಗ್ರೆಸ್ ದೇಶದ ಬಗ್ಗೆ ಯೋಚಿಸುವ ಬದಲು ಅಧಿಕಾರದ ಬಗ್ಗೆ ಮಾತ್ರ ಚಿಂತಿಸುತ್ತಿದೆ. ಕಾಂಗ್ರೆಸ್ ತೈಲ ಬಾಂಡ್ ಬಿಡುಗಡೆ ಮಾಡಿತು. ವಿದ್ಯುತ್ ಉಳಿಸಲು ಅವರು ತಪ್ಪು ನಿರ್ಧಾರ ತೆಗೆದುಕೊಂಡರು. ತೈಲ ಬಾಂಡ್‌ಗಳ ಹೊರೆ ನಮ್ಮ ಸರ್ಕಾರವು ಇನ್ನೂ ನಡೆಯುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
“ಕಳೆದ 5 ರಿಂದ 6 ವರ್ಷಗಳಲ್ಲಿ ನಮ್ಮ ಸರ್ಕಾರವು ಕಾಂಗ್ರೆಸ್ಸಿನ ಪಾಪದ ಹೊರೆಯನ್ನು ನಮ್ಮ ಸರ್ಕಾರ ಹೊತ್ತುಕೊಂಡಿದೆ. ತೈಲ ಬಾಂಡ್‌ಗಳಿಂದ ಸಾಕಷ್ಟು ಸಮಸ್ಯೆಯಾಗಿದೆ. 1,48,000 ಕೋಟಿ ರೂ. ಬದಲಿಗೆ, ನಾವು 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಪಡೆದಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ನಮ್ಮ ಸರ್ಕಾರದ ವಿರುದ್ಧ ಸುರಿಮಳೆಗೈಯುತ್ತಿದ್ದಾರೆ. ಆದರೆ ಅವರು ಈ ಬಗ್ಗೆ ಮಾತ್ರ ಮೌನವಾಗಿದ್ದಾರೆ” ಎಂದು ಮೋದಿ ಟೀಕಿಸಿದ್ದಾರೆ.