ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಸಿಂಗರ್ ಮೈಲಾರಿ ಅರೆಸ್ಟ್

ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಸಿಂಗರ್ ಮೈಲಾರಿ ಅರೆಸ್ಟ್


ಬಾಗಲಕೋಟೆ, (ಡಿಸೆಂಬರ್ 17): ಉತ್ತರ ಕರ್ನಾಟಕದ (ಉತ್ತರ ಕರ್ನಾಟಕ) ಖ್ಯಾತ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ‘(ಸಂಗೀತ ಮೈಲಾರಿ) ಬಂಧನವಾಗಿದೆ. ಅಪ್ರಾಪ್ತೆ ಮೇಲೆ ಅಪರಾಧ ಎಸಗಿದ ಆರೋಪದ ಮೇಲೆ ಮೈಲಾರಿಯನ್ನು ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಪೋಕ್ಸೊ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಮೈಲಾರಿ ಇಂದು (ಡಿಸೆಂಬರ್ 17) ಮಹಾರಾಷ್ಟ್ರಕ್ಕೆ ತೆರಳುತ್ತಿರುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಮಹಾರಾಷ್ಟ್ರದಲ್ಲಿ ಮೈಲಾರಿ ಬಂಧನ

ಬೆಳಗಾವಿ ಜಿಲ್ಲೆಯ ಮೈಲಾರಿ ಸೇರಿ 7 ಜನರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ನಂತರ ಡಿ.15ರಂದು ಮಹಾಲಿಂಗಪುರ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆಯಾಗಿತ್ತು.ಬಳಿಕ ಮಹಾಲಿಂಗಪುರ ಪೊಲೀಸರು, ಮೈಲಾರಿ ಬಂಧನಕ್ಕೆ ಹುಡುಕಾಟ ನಡೆಸಿದ್ದರು. ಸುಳಿವು ಸಿಗದಿದ್ದಕ್ಕೆ ತಂಡ ರಚನೆ ಮಾಡಿ ಕಾರ್ಯಚರಣೆ ನಡೆಸಲಾಯಿತು. ಕೊನೆಗೆ ಇಂದು ಬೆಳಗ್ಗೆ ಮಹಾರಾಷ್ಟ್ರದ ಜತ್ತದ ಮೈಲಾರಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್

ಪ್ರಕರಣದ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಇನ್ನು ಮೈಲಾರಿ ಬಂಧನದ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮ್ಯೂಸಿಕ್ ಮೈಲಾರಿ ವಿರುದ್ಧ ಡಿಸೆಂಬರ್ 14 ರಂದು ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಬ್ಬನ (ಮೈಲಾರಿ) ಮೇಲೆ ಪೊಕ್ಸೋ ಅಡಿ ಪ್ರಕರಣ ದಾಖಲಾಗಿದ್ದರೆ, ಇನ್ನುಳಿದ ಆರು ಜನರ ಮೇಲೆ ಬೆದರಿಕೆ ಹಾಗೂ ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಡಿಸೆಂಬರ್ 15 ರಂದು ನಮ್ಮ ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ತಕ್ಷಣ ನಾವು ಎಫ್.ಐ.ಆರ್ ದಾಖಲು ಮಾಡಿದ್ದೇವೆ. ಎಫ್.ಐಆರ್ ನಂತರ ಮೂರ್ನಾಲ್ಕು ತಂಡ ರಚಿಸಿ, ಆರೋಪಿಗಳ ಬಲೆಗೆ ಬೀಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೂರುದಾರಳಾದ ಅಪ್ರಾಪ್ತ ಬಾಲಕಿಯನ್ನೂ ನಾವು ವಿಚಾರಣೆ ಮಾಡಿದ್ದೇವೆ. ಪ್ರಮುಖ ಆರೋಪಿ ಮ್ಯೂಸಿಕ್ ಮೈಲಾರಿಯನ್ನ ಬೆಳಿಗ್ಗೆ 5 ಗಂಟೆಗೆ ಅರೆಸ್ಟ್ ಮಾಡಿದ ಬಗ್ಗೆ, ಆತನಿಗೆ ಮೆಡಿಕಲ್ ಮಾಡಿದ ಬಳಿಕ ಕೋರ್ಟ್ ಗೆ ಹಾಜರುಪಡಿಸುತ್ತೇವೆ.ಇನ್ನುಳಿದ 6 ಜನ ಆರೋಪಿಗಳು ಈಗ ನಮಗೆ ಕ್ಲಾರಿಟಿ ನೀಡಿದ್ದಾರೆ. ಅವರ ಪಾತ್ರದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಎಫ್‌ಐಆರ್ ಆದ ಪ್ರಮುಖ ಆರೋಪಿಯನ್ನು ನಾವು ವಶಕ್ಕೆ ಪಡೆದಿದ್ದೇವೆ ಎಂದು ಹೇಳಿದರು.

ಅಪ್ರಾಪ್ತ ಬಾಲಕಿಯು ಚಿಕ್ಕೋಡಿ ತಾಲೂಕಿನ ಜಾಗನೂರು ಗ್ರಾಮದಿಂದ ಮಹಾಲಿಂಗಪುರ ಬಸ್ ನಿಲ್ದಾಣದ ಬಳಿ ಬಿಡಿ ಎಂದು ಕೇಳಿಸಿಕೊಂಡಳು. ದೂರುದಾರರ ಮನೆ ಸಹ ನಮ್ಮ ಜಿಲ್ಲೆಯಲ್ಲಿ ಇಲ್ಲ. ದೂರಿನ ಪ್ರಕಾರ ಮಹಾಲಿಂಗಪುರ ಪಟ್ಟಣದಲ್ಲಿ ಘಟನೆ ನಡೆದ ಪ್ರಕರಣ ನಮಗೆ ವರ್ಗಾವಣೆ ಆಗಿದ್ದು, ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸ್ಥಳ ಮಹಜರು ಹಾಗೂ ಪಂಚನಾಮ ಸಹ ಆಗಿದೆ. ಲೋಕಲ್ ಮಾಹಿತಿ, ಕಾಲ್ ಡಿಟೇಲ್ ಕಲೆಕ್ಟ್ ಮಾಡಿ ತನಿಖೆ ಮಾಡಲಾಗಿತ್ತು ಎಂದು ಪ್ರಕಟಿಸಿದರು.

ಪ್ರಕರಣದ ಹಿನ್ನೆಲೆ

ಬೆಳಗಾವಿ (ಬೆಳಗಾವಿ)ಜಿಲ್ಲೆಯ ಗ್ರಾಮದಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡು ಮ್ಯೂಸಿಕ್ ಮೈಲಾರಿ ಆಗಮಿಸಿದ್ದರು. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು. ಕಾರ್ಯಕ್ರಮದ ವೇಳೆ ಅಡ್ಜ್‌ಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ಜೊತೆಗೆ, ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ. ಸದ್ಯ ಮ್ಯೂಸಿಕ್ ಮೈಲಾರಿ ಸೇರಿದಂತೆ ಜನರು ಅಪರಾಧ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಡಿಸೆಂಬರ್ 14 ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಪ್ರಕರಣವನ್ನು ಡಿಸೆಂಬರ್ 15 ರಂದು ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್‌ಆರ್ ದಾಖಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *