ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು

ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು


ಯಾದಗಿರಿ, (ಮಾರ್ಚ್ 05): ಫೋಕ್ಸೋ ಪ್ರಕರಣ ಸಂಬಂಧ ನಾಪತ್ತೆಯಾಗಿರುವ ಯಾದಗಿರಿಯ (ಯಾದಗಿರಿ) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (ಮಲ್ಲಿಕಾರ್ಜುನ ಮುತ್ಯಾ) ಪ್ರತ್ರಕ್ಷರಾಗಿದ್ದರೆ, ಇಂದು (ಮಾರ್ಚ್ 25) ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಆರು ಗಂಟೆಯಿಂದ ಮುತ್ಯಾನನ್ನು ಶಹಾಪುರ ಸರ್ಕಲ್ ಇನ್ಸ್‌ಪೆಕ್ಟರ್ ಶರಣಗೌಡ ನ್ಯಾಮಣ್ಣ ಅವರು ವಿಚಾರಣೆ ನಡೆಸಿದ್ದಾರೆ. ಬಳಿಕ ಮುತ್ಯಾನ ನಾಲ್ಕು ಮೊಬೈಲ್‌ಗಳನ್ನು ವಶಕ್ಕೆ ಪಡೆದು ಕಳುಹಿಸಿದ್ದಾರೆ.

ಈ ವಿಚಾರಣೆ ಬಳಿಕ ಪೊಲೀಸ್ ಠಾಣೆಯಿಂದ ಹೊರ ಬಂದ ಮಲ್ಲಿಕಾರ್ಜುನ ಮುತ್ಯಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನನಗೆ ಈ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪೊಲೀಸರು ಕರೆದ್ರೆ ವಿಚಾರಣೆಗೆ ಬರುತ್ತೆ ಅಂತ ನಾನು ಮೊದಲೇ ವಿಡಿಯೋ ಹೇಳಿಕೆ ನೀಡಿದ್ದೆ. ಆದರೆ, ನೋಟೀಸ್ ಕೊಟ್ಟ ಬಳಿಕ ನನಗೆ ಹುಷಾರಿರಲಿಲ್ಲ. ಅದಕ್ಕೆ ಮೂರು ದಿನ ತಡವಾಗಿ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡಿದ್ದು, ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ಕರೆದ್ರೆ ವಿಚಾರಣೆಗೆ ಹಾಜರಾಗುತ್ತೆನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *