ಕಳ್ಳತನ, ದರೋಡೆಯಲ್ಲಿ ಖಾಕಿ ಶಾಮೀಲು: ವಿಚಾರಣೆಗೆ ಬಂದಿದ್ದ ಆರೋಪಿಯಿಂದಲೇ ಹಣ ಎಗರಿಸಿದ ಹೆಡ್ ಕಾನ್ಸ್​​ಟೇಬಲ್

ಕಳ್ಳತನ, ದರೋಡೆಯಲ್ಲಿ ಖಾಕಿ ಶಾಮೀಲು: ವಿಚಾರಣೆಗೆ ಬಂದಿದ್ದ ಆರೋಪಿಯಿಂದಲೇ ಹಣ ಎಗರಿಸಿದ ಹೆಡ್ ಕಾನ್ಸ್​​ಟೇಬಲ್


ಬೆಂಗಳೂರು, ಡಿ.4: ಕಳ್ಳತನ, ಅಪರಾಧಕ್ಕೆ ಕಡಿವಾಣ (ಪೊಲೀಸರ ಭ್ರಷ್ಟಾಚಾರ ಕರ್ನಾಟಕ) ಹಾಕಬೇಕಾದ ಪೊಲೀಸರೇ ಇಂತಹ ಕೃತ್ಯದಲ್ಲಿ ಶಾಮೀಲಾದರೆ ರಾಜ್ಯದ ಕಾನೂನು ಸುವ್ಯಸ್ಥೆಯ ಗತಿ ಏನು? ಬೇಲಿಯೇ ಎದ್ದು ಹೊಲ ಮೇದಂತೆ ರಾಜ್ಯದ ಪೊಲೀಸರ ಕತೆ. ಒಬ್ಬಿಬ್ಬರು ಮಾಡುವ ಇಂತಹ ಕೆಲಸದಿಂದ ಇಡೀ ಇಲಾಖೆಗೆ ಕಪ್ಪುಚುಕ್ಕೆ ಬರುತ್ತದೆ. ಕಳ್ಳರ ಜೊತೆ ಪೊಲೀಸರೇ ಕೈ ಜೋಡಿಸಿರುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಿದೆ. ಇಂತಹ ಘಟನೆಗಳಿಂದ ಜನರಿಗೆ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಎಟಿಎಂಗೆ ಹಣ ಒಯ್ಯುತ್ತಿದ್ದ ವಾಹನದಿಂದ 7.11 ಕೋಟಿ ರೂ. ಹಣ ದರೋಡೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಗೋವಿಂದಪುರ ಠಾಣೆ ಪೊಲೀಸ್ ಕಾನ್‌ಟೇಬಲ್ ಅಣ್ಣಪ್ಪ ನಾಯ್ಕ್ ಅವರ ಕೈವಾಡ ಇದೆ ಎಂದು ಹೇಳಲಾಗಿದೆ. ಈ ಪ್ರಕರಣದ ನಂತರ ದಾವಣಗೆರೆಯಲ್ಲೂ ಇಂತಹದೇ ಒಂದು ಘಟನೆ ನಡೆದಿದೆ. ಇಬ್ಬರು ಪಿಎಸ್‌ಐ ಸೇರಿ ನಾಲ್ವರು ಪೋಲೀಸರು ಚಿನ್ನದ ವ್ಯಾಪಾರಿ ವಿಶ್ವನಾಥ್ ಬಳಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಸೈಬರ್ ವಂಚನೆ ಮಾಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿ ಬೆಂಗಳೂರು ಆಯುಕ್ತರ ಕಚೇರಿಗೆ ಕರೆದೊಯ್ದಿದ್ದು, ಆರೋಪಿಯ ಬಳಿ ಇದ್ದ ಹಣವನ್ನು ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಕರೆದೊಯ್ದಿದ್ದ ವೇಳೆ ರೂಪಾಯಿ ಹಣವನ್ನು ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ. ಇತ್ತೀಚೆಗೆ ಸೈಬರ್ ಪ್ರಕರಣಕ್ಕೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಆರೋಪಿ ಮತ್ತು ಆತನ ಕಾರನ್ನು ಸಿಸಿಬಿ ಅಧಿಕಾರಿಗಳು ಕಮಿಷನರ್ ಕಚೇರಿಗೆ ಬಂದಿದ್ದರು. ಈ ವೇಳೆ ಕಾರಿನಲ್ಲಿ 11 ಲಕ್ಷ ರೂ ಹಣವಿತ್ತು. ಈ ಹಣವನ್ನು ಹೆಡ್ ಕಾನ್ ಟೇಬಲ್ ಜಬಿವುಲ್ಲಾ ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಿರಿಯ ಅಧಿಕಾರಿಗಳ ಮುಂದೆ ಹೈಡ್ರಾಮ:

ಆರೋಪಿಯನ್ನು ಕಮಿಷನರ್ ಕಛೇರಿಗೆ ಕರೆದುಕೊಂಡು ಬಂದ ಸಂದರ್ಭದಲ್ಲಿ ಕಾರಿನಲ್ಲಿದ್ದ 11 ಲಕ್ಷ ಹೆಡ್ ಕಾನ್ ಟೇಬಲ್ ಜಬಿವುಲ್ಲಾ ಕಳ್ಳತನ ಮಾಡಿದ್ದಾರೆ. ಹಣ ಕಳ್ಳತನ ಏನು ಮಾಡಿ ಗೊತ್ತೇ ಇಲ್ಲ ಅನ್ನೋ ರೀತಿ ನಾಟಕ ಮಾಡಿದೆ. ಸ್ವಲ್ಪ ದಿನದ ನಂತರ ಆರೋಪಿ ಜಮೀನು ಜೈಲಿನಿಂದ ಹೊರ ಬಂದ ವೇಳೆ ಕಾರಿನಲ್ಲಿದ್ದ ಹಣದ ಬ್ಯಾಗ್ ನಾಪತ್ತೆ. ಈ ಬಗ್ಗೆ ಸಿಬಿ ಅಧಿಕಾರಿಗಳನ್ನು ಆರೋಪಿ ಪ್ರಶ್ನಿಸಿದ್ದಾರೆ. ಆರೋಪಿಯ ಮಾತು ಕೇಳಿ ಅಧಿಕಾರಿಗಳು ಗಾಬರಿಗೊಂಡು, ಹಣದ ಬ್ಯಾಗ್ ಹುಡುಕಲು ಶುರು ಮಾಡಿದ್ದಾರೆ. ಈ ವೇಳೆ ಸಿಸಿಬಿ ಕಚೇರಿ ಹೊರೆಗೆ ಇರುವ ಸಿಸಿಟಿವಿ ದೃಶ್ಯವನ್ನು ನೋಡಿದಾಗ ಹೆಡ್ ಕಾನ್ ಟೇಬಲ್ ಜಬಿವುಲ್ಲಾ ಹಣ ಬ್ಯಾಗ್ ಅನ್ನು ಎತ್ತಿಕೊಂಡು ಹೋಗಿರುವುದು ಕಂಡು ಬಂದಿದೆ. ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಅವರು ಜಬಿವುಲ್ಲಾ ಅವರ ಮನೆಗೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಈ ವೇಳೆ ಜಬಿವುಲ್ಲಾ ಅಧಿಕಾರಿಗಳು ಮುಂದೆ ಹೈಡ್ರಾಮ ಮಾಡಿದ್ದಾರೆ. ನಂತರ ಅಧಿಕಾರಿಗಳು ಮನೆಯೆಲ್ಲ ಹುಡುಕಾಡಿದ್ದಾರೆ. ಈ ವೇಳೆ ಬೆಡ್ ಕೆಳಗೆ ಹಣ ಜೋಡಿಸಿರುವುದು ಕಂಡು ಬಂದಿದೆ. ಇದರಲ್ಲಿ ಎರಡು ಲಕ್ಷ ಇತ್ತು ಮಾತ್ರ. ಉಳಿದ ಹಣದಲ್ಲಿ ಜಬಿವುಲ್ಲಾ ತಮ್ಮ ಹೆಂಡತಿಗೆ ಒಡವೆ ಮಾಡಿಸಿದ್ದಾರೆ. ಸದ್ಯಕ್ಕೆ 2 ಲಕ್ಷ ಹಣ ವಾಪಸ್ ಕೊಟ್ಟಿದ್ದು, ಉಳಿದ ಹಣವನ್ನು ತಕ್ಷಣವೇ ನೀಡುವಂತೆ ಆದೇಶ ನೀಡಿದೆ. ಈ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ವ್ಯಾಪಾರಿ ಬಳಿ ಚಿನ್ನ ದರೋಡೆ: PSI ಸೇವೆಯಿಂದ ವಜಾ, ಮತ್ತೋರ್ವ ಇನ್ಸ್ ಪೆಕ್ಟರ್ ಅಮಾನತು

7.11 ಕೋಟಿ ರೂ ದರೋಡೆ ಪ್ರಕರಣದ ಮಾಸ್ಟರ್‌ಮೈಂಡ್ ಕಾನ್‌ಟೇಬಲ್:

ಎಟಿಂಗಳಿಗೆ ಹಣ ಒಯ್ಯುತ್ತಿದ್ದ ವಾಹನವನ್ನು ಅಧಿಕಾರಿಗಳು ಸೋಗಿನಲ್ಲಿ ತಡೆದು 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಹಾಡಹಗಲೇ ಹಣ ಲೂಟಿ ಹೊಡೆಯಲು ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ಸಾಥ್ ನೀಡಿದ್ದರು ಎಂದು ಹೇಳಿದ್ದಾರೆ. ಇಡೀ ದರೋಡೆಯ ಮಾಸ್ಟರ್‌ಮೈಂಡ್ ಆಗಿದ್ದು, ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಚಿನ್ನದ ವ್ಯಾಪಾರಿಯಿಂದ ಪೊಲೀಸ್ ಅಧಿಕಾರಿಗಳು ದರೋಡೆ:

ನಾವು ಐಜಿ ಸ್ಕ್ವಾಡ್ ಎಂದು ನಕಲಿ ಗನ್ ಐಡಿ ಕಾರ್ಡ್ ತೋರಿಸಿ ಚಿನ್ನದ ವ್ಯಾಪಾರಿ ವಿಶ್ವನಾಥ್ ಅವರು ನನ್ನನ್ನು ಹೆದರಿಸಿದ ಬಂಗಾರವನ್ನು ದರೋಡೆ ಮಾಡಿದರು. ನವೆಂಬರ್ 24 ರಂದು ದಾವಣಗೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿತ್ತು. ಇದೀಗ ಪೊಲೀಸರೇ ಪ್ರಮುಖ ಆರೋಪಿಗಳು ಎಂದು ಹೇಳಿದ್ದಾರೆ. ಎರಡು ಪಿಎಸ್‌ಐ ಸೇರಿ ನಾಲ್ವರನ್ನು ದಾವಣಗೆರೆ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 1:11 pm, ಗುರು, 4 ಡಿಸೆಂಬರ್ 25



Source link

Leave a Reply

Your email address will not be published. Required fields are marked *