ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 14: ಕಾಂಗ್ರೆಸ್ ನಲ್ಲಿ (ಕಾಂಗ್ರೆಸ್) ಅಧಿಕಾರ ಹಂಚಿಕೆ ಕಿತ್ತಾಟದ ಕಿಡಿ ದಿನೇದಿನೆ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ‘ನಾ ಕೊಡೆ’ ಅಂದರೆ, ಡಿಸಿಎಂ ಡಿಕೆ ಶಿವಕುಮಾರ್ ‘ನಾ ಬಿಡೆ’ ಎಂದು ಪಟ್ಟು ಹಿಡಿದಿದ್ದಾರೆ. ಅದರಲ್ಲೂ ದೆಹಲಿಯಲ್ಲಿ ವರಿಷ್ಠರ ಭೇಟಿ ಮಾಡಿ ಬಂದ ಬಳಿಕ ಡಿಕೆಶಿ ವರಸೆಯೇ ಬದಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ ನಡೆಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವೇದಿಕೆ ಮೇಲೆ ಕೂತಿದ್ದರು. ಸಾಮಾನ್ಯವಾಗಿ ಅಕ್ಕಪಕ್ಕ ಕುಳಿತಿದ್ದಾಗ ಮಾತನಾಡುವುದು ಸಹಜ. ಆದರೆ, ಹಾಗೂ ಸಿಎಂ ಡಿಸಿಎಂ ತುಂಬಾ ಹೊತ್ತು ಮಾತನಾಡಲೇ ಇಲ್ಲ. ಕನಿಷ್ಠಪಕ್ಷ ಪರಸ್ಪರ ಮುಖ ನೋಡುವ ಸಾಹಸಕ್ಕೂ ಕೈ ಹಾಕಲಿಲ್ಲ!
ತುಂಬಾ ಹೊತ್ತಿನ ಬಳಿಕ ಇಬ್ಬರೂ ನದಿ ಮೂಲ ನಿರ್ವಹಣೆ ಪುಸ್ತಕದ ಬಗ್ಗೆ ಅನಿವಾರ್ಯವಾಗಿ ಇಡಲಾಗಿದೆ. ಒಟ್ಟಾರೆಯಾಗಿ ಈ ಬೆಳವಣಿಗೆ ‘ಕೈ’ ಒಡಕಿಗೆ ಕನ್ನಡಿ ಹಿಡಿದಿದೆ. ಇದನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದು, ದೆಹಲಿಯಿಂದ ರಾಜಕೀಯ ಗನ್ ಹಿಡಿದು ಬಂದಿದ್ದಾರೆ ಎಂದು ಕುಟುಕಿದ್ದಾರೆ.
ವಿಪಕ್ಷಗಳ ಟೀಕೆ, ಪಕ್ಷದೊಳಗೆ ಏನೇ ತಂತ್ರಗಳು ನಡೆದರೂ, ಮೌನಯುದ್ಧ ನಡೆದರೂ ಡಿಕೆ ಶಿವಕುಮಾರ್ ಗೆ ಮಾತ್ರ ಹೈಕಮಾಂಡ್ ಮೇಲೆ ವಿಶ್ವಾಸ ಹೆಚ್ಚುತ್ತಿದೆ. ದೆಹಲಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುವಾಗ, ‘ಏನು ಹೇಳಬೇಕೋ ಅದನ್ನು ವರಿಷ್ಠರಿಗೆ ಹೇಳಿದ್ದೇನೆ’ ಎಂದು ಹೇಳಿದ್ದಾರೆ. ಅವರ ಮಾತಿನಲ್ಲಿ ವಿಶ್ವಾಸದ ಬಲ ಹೆಚ್ಚಾದಂತೆ ಕಾಣಿಸುತ್ತಿತ್ತು.
ಗುರುವಾರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮುಂದೆ ಹಕ್ಕು ಮಂಡಿಸಿ ವಾಪಸ್ ಆಗಿರುವ ಡಿಕೆಶಿ, ನಂತರ ಕಾಲವೇ ಉತ್ತರಿಸುತ್ತದೆ ಎಂದಿದ್ದರು. ಇದರೊಂದಿಗೆ, ಫೆಬ್ರವರಿ 17 ರ ನಂತರ ಗೇಮ್ ಪ್ಲ್ಯಾನ್ ಚೇಂಜ್ ಆಗಲಿದೆಯೇ ಎಂಬ ಚರ್ಚೆಗೆ ಗ್ರಾಸವಾಗಿದೆ.
ಹೈಕಮಾಂಡ್ ಮಧ್ಯಪ್ರವೇಶ ಮಾಡುತ್ತೆ ಎಂಬುದು ಡಿಕೆಶಿ ಹಾಗೂ ಬಾಣದ ವಿಶ್ವಾಸ. ಆದರೆ ಬಜೆಟ್ ದಿನಾಂಕ ಘೋಷಿಸಿ, ಲೆಕ್ಕಪತ್ರ ಮಂಡಿಸಲು ಸಜ್ಜಾಗಿರುವ ಸಿಎಂ ಮುಂದಿನ ಒಂದು ತಿಂಗಳು ಬ್ಯೂಸಿ ಎಂಬ ಸಂದೇಶ ರವಾನಿಸಿದ್ದಾರೆ. ಈ ನಡುವೆ ಫೆಬ್ರವರಿ 17 ರ ಬಳಿಕ ಇಬ್ಬರಿಗೂ ಹೈಕಮಾಂಡ್ ಬುಲಾವ್ ನೀಡಲಾಯಿತು.
ಐಸಿಸಿ ಮೂಲಗಳು ಕೊಟ್ಟ ಮಾಹಿತಿ ಪ್ರಕಾರ, ಸಚಿವರು, ನಾಯಕರ ವರಿಷ್ಠರು ವಿಶ್ವಾಸಕ್ಕೆ ಮುಂದಾಗಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ, ಡಿಸಿಎಂ ಜತೆ ಪ್ರತ್ಯೇಕವಾಗಿ ಮಾತನಾಡುವ ಸಾಧ್ಯತೆ ಇದೆ.
ಸರ್ಕಾರಕ್ಕೆ ಅಜ್ಜಯ್ಯನ ಶಕ್ತಿ, ಮುಂದೇನೋ ಗೊತ್ತಿಲ್ಲ ಎಂದ ಡಿಕೆಶಿ
ಕಾಂಗ್ರೆಸ್ ನ ಒಟ್ಟಾರೆ ಬೆಳವಣಿಗೆ ಮಧ್ಯೆ, ಪ್ರಾರ್ಥನೆಯ ಮೇಲೆ ನಂಬಿಕೆ ಇಟ್ಟಿರುವ ಡಿಕೆ ಶಿವಕುಮಾರ್, ನೊಣವಿನಕೆರೆ ಅಜ್ಯಯ್ಯನ ಸನ್ನಿಧಿಗೆ ಭೇಟಿ ನೀಡಿದರು. ಜಾತ್ರಾ ಮಹೋತ್ಸವದ ಧರ್ಮಸಭೆಯಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಅಜ್ಜಯ್ಯನ ಶಕ್ತಿ ಇಲ್ಲದೇ ಇದ್ದರೆ ಈ ಸರ್ಕಾರ ಇಷ್ಟು ಶಕ್ತಿಯುತವಾಗಿ ಇರಲಿದೆ. ಮುಂದೆ ಏನಾಗುತ್ತದೆ ಎಂದು ನಾನು ಚರ್ಚೆಯಲ್ಲಿದೆ ಎಂದು ಟ್ವಿಸ್ಟ್ ಕೊಟ್ಟಿದ್ದಾರೆ.
ಇದನ್ನೂ ಓದಿ: ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು
ಈ ಬೆಳವಣಿಗೆ ಡಿಕೆಶಿ ಆಪ್ತರ ವಿಶ್ವಾಸ ಹೆಚ್ಚಿಸಿದ್ರೆ, ಸಿಎಂ ಆಪ್ತರು ತ್ಯಾಗದ ಪ್ರಶ್ನೆಯೇ ಇಲ್ಲ. ಈ ನಡುವೆ ಸರ್ಕಾರ ಸಾವಿರ ದಿನದ ಸಂಭ್ರಮದಲ್ಲಿದೆ. ಇಂದು ಹಾವೇರಿಯಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಟ್ಟದಾಟದ ನಡುವೆ, ಸಾವಿರ ದಿನದ ಸಂಭ್ರಮ ನಡೆಯುತ್ತಿದೆ. ಇಂದಿನ ಕಾರ್ಯಕ್ರಮದ ಎಲ್ಲರ ಚಿತ್ತ ನೆಟ್ಟಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ