
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೂಡ ಎಕ್ಸ್‌ನಲ್ಲಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ. ನಾಗ್ಪುರ ಜಿಲ್ಲೆಯ ಕಟೋಲ್‌ನ ರೌತ್‌ಲ್‌ಗಾವ್ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಂಪನಿಯಾದ ಎಸ್‌ಬಿಎಲ್ ಎನರ್ಜಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 17 ಕಾರ್ಮಿಕರು ಸಾವನ್ನಪ್ಪಿದ ದುರಂತ ಮತ್ತು ದುರದೃಷ್ಟಕರ ಘಟನೆ ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತ ಕಾರ್ಮಿಕರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿ. ಅವರ ಕುಟುಂಬಗಳಿಗೆ ನನ್ನ ಸಂತಾಪಗಳು, ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಅವರು ಟ್ವಿಟ್ ಮಾಡಿದ್ದಾರೆ.
#WATCH | Nagpur, Maharashtra | 15 people died, 18 critically injured after an explosion at SBL Energy Limited in Nagpur: Harssh Poddar, SP, Nagpur Rural
NDRF team is also present here. pic.twitter.com/WatYhpXNyM
— ANI (@ANI) March 1, 2026