
ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿ ಪುತ್ರಿ ರಾಧ್ಯಾ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಅವರು ಸಿನಿಮಾದ ಕೆಲಸಗಳಲ್ಲಿ ಎಷ್ಟು ಬ್ಯೂಸಿ ಆಗಿದ್ದರೂ ಕೂಡ ಕುಟುಂಬಕ್ಕೆ ಸಮಯ ಇದೆ. ಮಕ್ಕಳ ಹುಟ್ಟುಹಬ್ಬವನ್ನು ಅವರು ಸಂಭ್ರಮದಿಂದ ಆಚರಿಸುತ್ತಾರೆ. ‘ಕಾಂತಾರ: ಅಧ್ಯಾಯ 1’ ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಅವರಿಗೆ ಹೆಚ್ಚಿನ ಬೇಡಿಕೆಯಿದೆ. ಹೊಸ ಸಿನಿಮಾದ ಕೆಲಸಗಳತ್ತ ಅವರು ಗಮನ ಹರಿಸಿದ್ದಾರೆ. ಪರಭಾಷೆಯಿಂದಲೂ ಅವರಿಗೆ ಬೇಡಿಕೆ ಬಂದಿದೆ. ಈ ಎಲ್ಲ ಕೆಲಸಗಳ ನಡುವೆ ಅವರ ಪುತ್ರಿ ರಾಧ್ಯಾ (ರಾಧ್ಯಾ) ಹುಟ್ಟುಹಬ್ಬವನ್ನು ಭರ್ಜರಿಯಾಗಿ ಸೆಲಬ್ರೇಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.