ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ

ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ


ಪುತ್ತೂರು, ಮಾರ್ಚ್ 1: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ಭೇಟಿ ನೀಡಿ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಭಾರತೀಯ ತೈಲಾಗಾರ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹೆಗಾರರಾದ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಅವರು ಪುತ್ತೂರಿನ ಲಕ್ಷ್ಮೀದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಹಾಲಕ್ಷ್ಮೀ ದೇವಿ ಅಮ್ಮನವರ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಸಮುದಾಯದ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಇದಾದ ಬಳಿಕ ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪುತ್ತೂರಿನ ಕೋಟೆಚಾಲ್‌ನಲ್ಲಿ ನಡೆಯುತ್ತಿರುವ ಗಾಣಿಗ ಸಂಗಮದಲ್ಲಿ ವಿವಿಧ ಭಾಗಗಳಲ್ಲಿ ಸಮುದಾಯದ ಸಂಸ್ಥೆಗಳು, ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಕಾರ್ಯಕ್ರಮದಲ್ಲಿ ಸಮುದಾಯದ ಏಕತೆ, ಶೈಕ್ಷಣಿಕ ಅಭಿವೃದ್ಧಿ, ಆರ್ಥಿಕ ಸಬಲೀಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಆಯೋಜಕರು. ಪ್ರಹ್ಲಾದ್ ಮೋದಿ ಅವರ ಆಗಮನದಿಂದ ಕಾರ್ಯಕ್ರಮಕ್ಕೆ ಹೆಚ್ಚುವರಿ ಮೆರುಗು ಬಂದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *