‘ಕರಾವಳಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಿಲೀಸ್ಗೆ ಸಿದ್ಧವಾಗುತ್ತಿದೆ. ಸಂಪದಾ, ರಾಜ್ ಬಿ ಶೆಟ್ಟಿ, ರಮೇಶ್ ಇಂದಿರಾ, ಮಿತ್ರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.

‘ನಾನು ಯಾವತ್ತೂ ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿ ಚಿತ್ರ ಮಾಡಿದ್ದೇವೆ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’. ಹೀಗೆ ಹೇಳಿದ್ದು ಪ್ರಜ್ವಲ್ ದೇವರಾಜ್.

ಅವರು ವಿಭಿನ್ನ ಗೆಟಪ್ನಲ್ಲಿ ನಟಿಸಿರುವ ‘ಕರಾವಳಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಿಲೀಸ್ಗೆ ಸಿದ್ಧವಾಗುತ್ತಿದೆ. ಸಂಪದಾ, ರಾಜ್ ಬಿ ಶೆಟ್ಟಿ, ರಮೇಶ್ ಇಂದಿರಾ, ಮಿತ್ರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಗೆಟಪ್ನಲ್ಲಿ ಕಾಣಿಸಿಕೊಂಡರು.

ಈಗಾಗಲೇ ‘ಕರಾವಳಿ’ ಸಿನಿಮಾದ ಒಂದಷ್ಟು ಪಾತ್ರಗಳ ಝಲಕ್ ಅನ್ನು ಪೋಸ್ಟರ್ ಮೂಲಕ ತೋರಿಸಲಾಗಿದೆ. ಶೀರ್ಷಿಕೆಯೇ ಸೂಚಿಸುವಂತೆ ಇದು ಕರಾವಳಿ ಭಾಗದ ಸಂಸ್ಕೃತಿ, ಸೊಗಡು ಇರುವ ಸಿನಿಮಾ ಆಗಿರಲಿದೆ.

ಇನ್ನು ರಾಜ್ ಬಿ ಶೆಟ್ಟಿ ಈ ಚಿತ್ರದಲ್ಲಿ ಮಾವೀರ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವರ ಫಸ್ಟ್ ಲುಕ್ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ರಾಜ್ ಬಿ ಶೆಟ್ಟಿ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದರಿಂದ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ.

’ಕರಾವಳಿ’ ಸಿನಿಮಾ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕ ಹಳ್ಳಿ ಬ್ಯಾಕ್ ಡ್ರಾಪ್ನಲ್ಲಿ ಸಿನಿಮಾ ಮೂಡಿಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

Source link
ಭಯಪಟ್ಟು ಮಾಡಿರುವ ಪಾತ್ರ ನನ್ನದು.. ತುಂಬಾ ಖುಷಿ ಇದೆ: ಪ್ರಜ್ವಲ್ ದೇವರಾಜ್ ಹೇಳಿದ್ದೇನು?