ಪ್ರಕಾಶ್ ರಾಜ್ ಅವರು (ಪ್ರಕಾಶ್ ರಾಜ್) ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಸಿನಿಮಾ ಮಾಡೋದು ಕಡಿಮೆ ಆಗಿದೆ. ಆದರೆ, ವಿವಾದಗಳು ಕಡಿಮೆ ಆಗಿಲ್ಲ. ಒಬ್ಬಲ್ಲ ಒಬ್ಬರ ಭಾವನೆಗೆ ಧಕ್ಕೆ ತರುವ ಕೆಲಸ ಅವರಿಂದ ಆಗುತ್ತಲೇ ಇದೆ. ಈಗ ಅವರು ವಿವಾದಕ್ಕೆ ಗುರಿಯಾಗಿದ್ದಾರೆ. ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್ ಕೇಸ್ ಹಾಕಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಕಾಶ್ ರಾಜ್ ಅವರು ವೇದಿಕೆಯ ಮೇಲೆ ಮಾತನಾಡುತ್ತಾರೆ. ರಾಮ ಉತ್ತರ ಭಾರತದವನು ಮತ್ತು ರಾವಣ ದಕ್ಷಿಣ ಭಾರತದ ಆದಿವಾಸಿ ಎಂದಿದ್ದರು ಪ್ರಕಾಶ್ ರಾಜ್. ರಾಮ ಹಣ್ಣನ್ನು ಕಿತ್ತು ತಿಂದ ಇಬ್ಬರ ಮಧ್ಯೆ ಕಿತ್ತಾಟ ಶುರುವಾಯಿತು ಎಂದು ಹೇಳಿ ಚರ್ಚೆ ಹುಟ್ಟುಹಾಕಿದ್ದಾರೆ. ಈಗ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ಹೇಳಲಾಗಿದೆ.
ಪ್ರಕಾಶ್ ರಾಜ್ ರಾಮ್ ಉತ್ತರ ಭಾರತೀಯ, ರಾವಣ ದಕ್ಷಿಣ ಭಾರತದ ಬುಡಕಟ್ಟು ಎಂದು ಹೇಳಿಕೊಳ್ಳುತ್ತಾರೆ ಮತ್ತು ರಾಮ್ “ಹಣ್ಣುಗಳನ್ನು ಕದ್ದ ಕಾರಣ” ಅವರ ಸಂಘರ್ಷ ಪ್ರಾರಂಭವಾಯಿತು.
ನೀವು ಚರ್ಚ್ನಿಂದ ಇತಿಹಾಸ್ ಅನ್ನು ಕಲಿತಾಗ ಇದು ಸಂಭವಿಸುತ್ತದೆ pic.twitter.com/yRJmEzwivq
— ಜೈಪುರ ಸಂಭಾಷಣೆಗಳು (@JaipurDialogues) ಏಪ್ರಿಲ್ 16, 2026
ಪ್ರಕಾಶ್ ರಾಜ್ ಹೇಳಿಕೆ ಏನು?
ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಯಾವಾಗ ಲಕ್ಷ್ಮಣನಿಗೆ ಹಸಿ ಇದೆ. ಅಲ್ಲಿ ಹಣ್ಣಿನ ತೋಟ ಒಂದಾಗಿರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ’ ಎಂದು ಕಥೆ ಆರಂಭಿಸಿದ್ದಾರೆ ಪ್ರಕಾಶ್ ರಾಜ್.
ಇದನ್ನೂ ಓದಿ: ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ
‘ಆ ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ, ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ನಡೆಯಲಿದೆ’ ಎಂದು ಪ್ರಕಾಶ್ ರಾಜ್. ಈ ವಿಷಯಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.