
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಮಾರಂಭದಲ್ಲಿ ‘17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಮಾನತೆ, ಬಡತನ, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು, ಮಹಿಳೆಯರ ವಾಸ್ತವ ಸ್ಥಿತಿಯನ್ನು ಚಲನಚಿತ್ರಗಳು ತೆರೆದಿಡಬೇಕು. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ಕೆಲಸ ನಿರ್ವಹಿಸಬೇಕು. ಡಾ.ರಾಜ್‌ಕುಮಾರ್ ಅವರ ಚಲನಚಿತ್ರಗಳಲ್ಲಿ ಇದನ್ನು ಕಾಣಬಹುದಿತ್ತು ಎಂದು ತಿಳಿಸಿದರು.