
ಬೆಂಗಳೂರು, ಮಾರ್ಚ್ 21: ಮೇ ತಿಂಗಳಿನಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆಯಲ್ಲಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಬಜೆಟ್ ನಲ್ಲಿ ಸ್ವಾಮೀಜಿಗಳಿಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದರು. ಸಿಎಂ ಪರವಾಗಿ ಮಾತನಾಡಿದ ಸ್ವಾಮೀಜಿಗಳಿಗೆ ಭೂಮಿ ಕೊಟ್ಟಿದ್ದಾರೆ. ಬಡ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಯಾಕೆ ಅನುದಾನ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಬೇಕು. ಡಿಕೆ ಶಿವಕುಮಾರ್ ಸಿಎಂ ಮಾಡಬೇಕು ಎಂದು ವರಿಷ್ಠರಿಗೆ ಮನವಿ ಮಾಡ್ತೇವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.