
ಬೆಂಗಳೂರು, ಏಪ್ರಿಲ್ 01: ಇಂದು ಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ. ಸಕಲ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಕರಗ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಗ ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿಯನ್ನು ಬೆಂಗಳೂರಿನ ಹೆಚ್‌ಎಎಲ್ ಏರ್‌ಪೋರ್ಟ್‌ಗೆ ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಮುಂದಿನ ದಿನಗಳಲ್ಲಿ ದೇಗುಲಕ್ಕೆ ಭೇಟಿ ನೀಡುವ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುರ್ಮು ಅವರಿಗೆ ಶ್ರೀಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ನೀಡಲಾಗುತ್ತದೆ. ಈ ಬಗ್ಗೆ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಮಾತನಾಡಿದ್ದು, ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದಾರೆ. ನಾನೇ ಅಧ್ಯಕ್ಷ ಹೇಳಿದರು. ದೇವಸ್ಥಾನದ ಮಹಿಮೆ ಹೇಳಿದೆ. ಒಂದು ದಿನ ದೇವಸ್ಥಾನಕ್ಕೆ ಬರುತ್ತೇನೆ, ಜನರಿಗೆ ನನ್ನ ಶುಭಹಾರೈಕೆ ತಿಳಿಸಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.