
ಕೋಲಾರ, ಜನವರಿ 14: ಜಿಲ್ಲೆಯ ಕೆಜಿಎಫ್ ತಾಲೂಕಿನ ಗಡಿಭಾಗದ ಎನ್.ಜಿ. ಹುಲ್ಕೂರು ಗ್ರಾಮ ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ಬಸ್ಸಂಸ್ಥೆಯ ತೆರಿಗೆ ವಂಚನೆಯನ್ನು ಬಯಲಿಗೆಳೆದಿದ್ದಾರೆ. ಆಂಧ್ರಪ್ರದೇಶದಿಂದ ಬರುತ್ತಿದ್ದ ಖಾಸಗಿ ಬಸ್ಸನ್ನು ತಪಾಸಣೆ ನಡೆಸಿದಾಗ, ಒಂದೇ ವಾಹನಕ್ಕೆ ಎರಡು ಬೇರೆ ಬೇರೆ ನೋಂದಣಿ ಸಂಖ್ಯೆಗಳಿವೆ. ಬಸ್ನ ಹಿಂಭಾಗದಲ್ಲಿ ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಇದ್ದರೆ, ಮುಂಭಾಗದಲ್ಲಿ ಮಂಗಳೂರು ನೋಂದಣಿ ಸಂಖ್ಯೆ ಪ್ರದರ್ಶಿಸಲಾಗಿದೆ. ಜೊತೆಗೆ, ಬಸ್‌ನ ಚಾಸಿ ಸಂಖ್ಯೆಯನ್ನು ಪರಿಶೀಲಿಸಿದಾಗ ಅದು ಮೈಸೂರಿನ ನೋಂದಣಿಗೆ ಸಂಬಂಧಿಸಿದೆ. ಬಾಗೇಪಲ್ಲಿ ವೈ.ಜಿ.ಎಸ್. ಟೂರ್ಸ್ ಅಂಡ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಈ ಬಸ್ ತೆರಿಗೆ ವಂಚನೆ ಮಾಡಿ ಸಂಚರಿಸುತ್ತಿದ್ದ ಹಿನ್ನೆಲೆ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಬಸ್ಸನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.