Headlines

ಮಗಳಿಗಾಗಿ ಪತ್ನಿಯನ್ನು ಅಪಹರಿಸಿದ ನಿರ್ಮಾಪಕ: ಏನಿದು ಪ್ರಕರಣ?

ಮಗಳಿಗಾಗಿ ಪತ್ನಿಯನ್ನು ಅಪಹರಿಸಿದ ನಿರ್ಮಾಪಕ: ಏನಿದು ಪ್ರಕರಣ?


ಸಿನಿಮಾ (ಸಿನಿಮಾ) ನಿರ್ಮಾಪಕ, ನಟನೊಬ್ಬ, ತನ್ನ ಮಗಳಿಗಾಗಿ ಪತ್ನಿಯನ್ನೇ ಅಪಹರಿಸಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ನಿರ್ಮಾಣ ಮಾಡಿ, ನಟನೆಯನ್ನೂ ಮಾಡಿರುವ ಹರ್ಷವರ್ಧನ್ ಎಂಬುವರು ಪತ್ನಿಯನ್ನೇ ಅಪಹರಿಸಿ ಬಳಿಕ ಅವರನ್ನು ಮನೆಗೆ ಒಪ್ಪಿಸಿದ್ದಾರೆ. ಆದರೆ ಹೀಗೆ ಪತ್ನಿಯನ್ನೇ ಅಪಹರಿಸಲು ಅವರ ಮಗಳೇ ಕಾರಣ. ಇದೀಗ ಪತಿ-ಪತ್ನಿ ಅವರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಇದು ಕೌಟುಂಬಿಕ ವಿಷಯ, ತಾವು ಇದನ್ನು ಬಗೆಹರಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಆಗಿದ್ದಿಷ್ಟು, ಹರ್ಷವರ್ಧನ್, ವರ್ಧನ್ ಸಿನಿಮಾಸ್ ಕಂಪನಿ ಹೆಸರಿನ ಸಿನಿಮಾ ನಿರ್ಮಾಣ ಸಂಸ್ಥೆ ಹೊಂದಿದ್ದು, ‘ನಿನ್ನಲ್ಲೇನೋ ಹೇಳಬೇಕು’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆ ಸಿನಿಮಾದಲ್ಲಿ ಚೈತ್ರಾ ಎಂಬವರು ನಟಿಸಿದ್ದರು. ಬಳಿಕ ಅವರಿಬ್ಬರೇ ಪ್ರೀತಿಸಿ ಮದುವೆ ಸಹ ಆಗಿದ್ದಾರೆ. ಇಬ್ಬರಿಗೂ ಹೆಣ್ಣು ಮಗು ಕೂಡ ಇದೆ. ಆದರೆ ಕೌಟುಂಬಿಕ ಕಲಹಗಳಿಂದ ಹರ್ಷವರ್ಧನ್ ಮತ್ತು ಚೈತ್ರಾ ಇಬ್ಬರೂ ದೂರವಾಗಿದ್ದರೆ, ಮಗು, ಚೈತ್ರಾ ಅವರ ಜೊತೆಗೆ ಇದ್ದಾರೆ.

ಮಗಳನ್ನು ನೋಡಲು ಪತ್ನಿ ಅವಕಾಶ ಮಾಡಿಕೊಡುವಂತೆ. ಇದರಿಂದ ಬೇಸರಗೊಂಡ ಹರ್ಷವರ್ಧನ್, ತನ್ನ ಗೆಳೆಯನೊಟ್ಟಿಗೆ ಪೂರಕು ಪತ್ನಿಯನ್ನೇ ಅಪಹರಿಸಿದ್ದಾರೆ. ಗೆಳೆಯನ ಮೂಲಕ, ಶೂಟಿಂಗ್ ಇದೆಯೆಂದು ಹೇಳಿ ಚೈತ್ರಾ ಅವರಿಗೆ 20 ಸಾವಿರ ರೂಪಾಯಿ ಅಡ್ವಾನ್ಸ್ ಕೊಡಿಸಿ, ಮೈಸೂರಿಗೆ ಶೂಟಿಂಗ್ ಎಂದು ಕರೆಸಿದ್ದಾರೆ. ಬಳಿಕ ಪತ್ನಿಯನ್ನು ಅಪಹರಣ ಮಾಡಿ, ಚೈತ್ರಾ ಅವರ ತಾಯಿಗೆ ಕರೆ ಮಾಡಿ, ‘ನಿಮ್ಮ ಮಗಳನ್ನು ಅಪಹರಿಸಿದ್ದಾರೆ, ನನ್ನ ಮಗಳನ್ನು ಕಳಿಸಿದರೆ ನಾನು ನಿಮ್ಮ ಮಗಳನ್ನು ಬಿಟ್ಟು ಕಳಿಸುತ್ತೀನಿ’ ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ:ಕನ್ನಡ ಸಿನಿಮಾವನ್ನು ಟೀಕಿಸಲು ಬಂದ ಸಂದರ್ಶಕನಿಗೆ ಉಪೇಂದ್ರ ಖಡಕ್ ಉತ್ತರ

ಕೂಡಲೇ ಚೈತ್ರಾ ಅವರ ಸಹೋದರಿ, ಬ್ಯಾಟರಾಯನಪುರ ಪೊಲೀಸರಿಗೆ ಮಾಹಿತಿ ತಿಳಿಸಿ, ದೂರು ನೀಡಿ. ಬಳಿಕ ಹರ್ಷವರ್ಧನ್ ಅವರೇ ಪತ್ನಿಯನ್ನು ಕರೆದುಕೊಂಡು ಬಂದು ಅವರ ಕುಟುಂಬಕ್ಕೆ ಒಪ್ಪಿಸಿದ್ದಾರೆ. ಬಳಿಕ ಇಬ್ಬರನ್ನೂ ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ, ‘ಇದು ಕೌಟುಂಬಿಕ ವಿಷಯ ನಾವು ಇದನ್ನು ಬಗೆಹರಿಸಿಕೊಳ್ಳುತ್ತೇವೆ’ ಎಂದು ಪೊಲೀಸರ ಮುಂದೆ ಚೈತ್ರಾ ಮತ್ತು ಹರ್ಷವರ್ಧನ್ ಹೇಳಿದ್ದಾರೆ. ಪೊಲೀಸರು, ಮತ್ತೊಮ್ಮೆ ವಿಚಾರಣೆಗೆ ಹಾಜರಾಗಬೇಕೆಂದು ಹೇಳಿ ಹರ್ಷವರ್ಧನ್ ಅವರನ್ನು ಬಿಟ್ಟು ಕಳಿಸಿದ್ದಾರೆ.

ತನ್ನ ಮಗಳ ಮುಖ ನೋಡಲು ಅವಕಾಶ ಮಾಡಿಕೊಟ್ಟಿಲ್ಲ, ಮಗುವಿನೊಂದಿಗೆ ಮಾತನಾಡಲು ಸಹ ಅವಕಾಶ ಮಾಡಿಕೊಡಲು ಪದೇ ಪದೇ ಕೇಳಿಕೊಂಡರೂ ಸಹ ಮಗುವಿನ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರ ಎದುರು ಹರ್ಷವರ್ಧನ್ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 5:40 pm, ಮಂಗಳವಾರ, 16 ಡಿಸೆಂಬರ್ 25



Source link

Leave a Reply

Your email address will not be published. Required fields are marked *