Headlines

ಶರಾವತಿ ಮುಳುಗಡೆ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ : ಸಿಗಂದೂರು ಸೇತುವೆ ಮೇಲೆ ಪ್ರತಿಭಟನೆ

ಶರಾವತಿ ಮುಳುಗಡೆ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ : ಸಿಗಂದೂರು ಸೇತುವೆ ಮೇಲೆ ಪ್ರತಿಭಟನೆ

ಶರಾವತಿ ಮುಳುಗಡೆ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ : ಸಿಗಂದೂರು ಸೇತುವೆ ಮೇಲೆ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಅರಣ್ಯ ಭೂಮಿ ಸಾಗುವಳಿದಾರರು ತಮ್ಮ ಭೂಮಿಯ ಹಕ್ಕಿಗಾಗಿ ಪ್ರತಿಭಟನೆ ನಡೆಸಿದರು. ಮದನ್ ಗೋಪಾಲ್ ಸಮಿತಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿದರು.

ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನ ಸಿಗಂದೂರು ಸೇತುವೆ ಮೇಲೆ ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯ್ತು.

ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್, ನ್ಯಾಯವಾದಿ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತವಾಗಿದೆ.

ರೈತರ ಭೂಮಿಯ ಹಕ್ಕಿನ ಸಮಸ್ಯೆ ಪರಿಹಾರ ಮಾಡುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಇದಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು ಅರಣ್ಯಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು.

ಇದನ್ನೂ ಓದಿ: ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ: 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್‌ಹ್ಯಾಂಡಾಗಿ ಸೆರೆ

ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಶೋಕ್ ಬೇಸೂರು, ನಾಗರಾಜ್ ಹೆಬ್ಸೆ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಖಮೇನಿ ಸಾವಿನ ಬಗ್ಗೆ ಮೌನ: ಕೇಂದ್ರ ಸರ್ಕಾರದ ನಡೆ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ

Source link

Leave a Reply

Your email address will not be published. Required fields are marked *