
ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ