ಸರ್ಕಾರಿ ನ್ಯಾಯಬೆಲೆ ಅಂಗಡಿ ಚಿತ್ರದಲ್ಲಿ ದಿಟ್ಟ ಮಹಿಳೆಯ ಪಾತ್ರ: ನಟಿ ರಾಗಿಣಿ ದ್ವಿವೇದಿ

ಸರ್ಕಾರಿ ನ್ಯಾಯಬೆಲೆ ಅಂಗಡಿ ಚಿತ್ರದಲ್ಲಿ ದಿಟ್ಟ ಮಹಿಳೆಯ ಪಾತ್ರ: ನಟಿ ರಾಗಿಣಿ ದ್ವಿವೇದಿ

ಸರ್ಕಾರಿ ನ್ಯಾಯಬೆಲೆ ಅಂಗಡಿ ಚಿತ್ರದಲ್ಲಿ ದಿಟ್ಟ ಮಹಿಳೆಯ ಪಾತ್ರ: ನಟಿ ರಾಗಿಣಿ ದ್ವಿವೇದಿ

ರಾಗಿಣಿ ದ್ವಿವೇದಿ, ಕುಮಾರ್‌ ಬಂಗಾರಪ್ಪ ಮುಖ್ಯ ಪಾತ್ರಗಳಲ್ಲಿರುವ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾದ ಕ್ಯಾರೆಕ್ಟರ್‌ ಟೀಸರ್‌ ಬಿಡುಗಡೆಯಾಗಿದೆ. ನನ್ನ ಪಾತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ ಎಂದು ರಾಗಿಣಿ ತಿಳಿಸಿದರು.

ರಾಗಿಣಿ ದ್ವಿವೇದಿ, ಕುಮಾರ್‌ ಬಂಗಾರಪ್ಪ ಮುಖ್ಯ ಪಾತ್ರಗಳಲ್ಲಿರುವ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾದ ಕ್ಯಾರೆಕ್ಟರ್‌ ಟೀಸರ್‌ ಬಿಡುಗಡೆಯಾಗಿದೆ. ಚಿತ್ರದಲ್ಲಿ ಮಾಜಿ ಸಂಸದ ಎಲ್‌ ಆರ್‌ ಶಿವರಾಮೇಗೌಡ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ನಾಯಕಿ ರಾಗಿಣಿ ದ್ವಿವೇದಿ, ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ಅವ್ಯವಹಾರ ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ದಿಟ್ಟ ಮಹಿಳೆಯ ಪಾತ್ರವಿದು.

ನನ್ನ ಸಿನಿಮಾ ಕೆರಿಯರ್‌ನಲ್ಲಿ ಈವರೆಗೂ ಮಾಡಿರದ ಅಪರೂಪದ ಪಾತ್ರ ಈ ಸಿನಿಮಾದಲ್ಲಿದೆ. ನನಗೆ ಗೊತ್ತಿರುವಂತೆ, ಕನ್ನಡ ಚಿತ್ರರಂಗದಲ್ಲಿ ಇಂತಹ ಸಿನಿಮಾ ಇಲ್ಲಿಯವರೆಗೂ ಬಂದಿಲ್ಲ. ನನ್ನ ಪಾತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ ಎಂದು ತಿಳಿಸಿದರು.

ಸಾತ್ವಿಕ್‌ ಪವನ್‌ ಕುಮಾರ್‌ ನಿರ್ದೇಶನದ ಈ ಸಿನಿಮಾವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್‌ ನಿರ್ಮಾಣ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್‌ ಆರ್ಯನ್‌ ಸಂಗೀತ ಸಂಯೋಜಿಸುತ್ತಿದ್ದಾರೆ.

ಮಂಡ್ಯ ಸುತ್ತಮುತ್ತಲಿನ ಸ್ಥಳಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಮುಂದಿನ ವರ್ಷ ತಮ್ಮ ಸಿನಿಮಾವನ್ನು ಬಿಡುಗಡೆಗೊಳಿಸಲಿದೆ.

Source link

Leave a Reply

Your email address will not be published. Required fields are marked *