ಜನವರಿ, ನವೆಂಬರ್ 29: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದ ಬೆನ್ನಲ್ಲೇ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಕರ್ನಾಟಕ ಕಾಂಗ್ರೆಸ್ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಈ ಸಭೆ ನಡೆಸಲಾಗುತ್ತಿದೆ ಮೂಲಗಳು ತಿಳಿಸಿವೆ. ಸಭೆ ಇನ್ನೂ ಮುಂದುವರಿದಿದ್ದು, ದಿನವಿಡೀ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಬಹುದೆಂದು ಹೇಳಲಾಗಿದೆ. ಇಂದಿನ ಸಭೆಗೆ ಕೆಸಿ ವೇಣುಗೋಪಾಲ್ ಮತ್ತು ಸುರ್ಜೆವಾಲ ಹಾಜರಾಗಿಲ್ಲ. ನಾಳೆಯ ಸಭೆಯಲ್ಲಿ ಕೆಸಿ ವೇಣುಗೋಪಾಲ್, ಸುರ್ಜೆವಾಲ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಜರಿರುವ ಸಾಧ್ಯತೆ ಇದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ