ತೆಲುಗು ಖಾಕಿ ಸಿನೆಮಾ ಸ್ಟೈಲ್​ನಲ್ಲಿ ರಾಯಚೂರು ಪೊಲೀಸರ ಆಪರೇಷನ್: ನಕಲಿ ಡಿಸಿ ಫೇಸ್‌ಬುಕ್ ಖಾತೆ ಪ್ರಕರಣದಲ್ಲಿ ಸೈಬರ್ ವಂಚಕ ಅರೆಸ್ಟ್!

ತೆಲುಗು ಖಾಕಿ ಸಿನೆಮಾ ಸ್ಟೈಲ್​ನಲ್ಲಿ ರಾಯಚೂರು ಪೊಲೀಸರ ಆಪರೇಷನ್: ನಕಲಿ ಡಿಸಿ ಫೇಸ್‌ಬುಕ್ ಖಾತೆ ಪ್ರಕರಣದಲ್ಲಿ ಸೈಬರ್ ವಂಚಕ ಅರೆಸ್ಟ್!


ರಾಯಚೂರು, ಜನವರಿ 10: ತೆಲುಗು ಖಾಕಿ ಸಿನೆಮಾ ಶೈಲಿಯನ್ನು ನೆನಪಿಸುವಂತೆ ರಾಯಚೂರು ಸೈಬರ್ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕುಖ್ಯಾತ ವಂಚಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತ ಎರಡು ತಿಂಗಳ ಕಾಲ ರಾಜಸ್ಥಾನದಲ್ಲಿ ಗುಪ್ತ ಕಾರ್ಯಾಚರಣೆ ನಡೆಸಿದ ಪೊಲೀಸರು, ಐಎಸ್‌ಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ ಜನರನ್ನು ವಂಚಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ರಾಜಸ್ಥಾನ ಮೂಲದ ಆರೋಪಿ ಅಂದರ್

ಬಂಧಿತನನ್ನು ಶಕೀಲ್ (19) ಎಂದು ಗುರುತಿಸಲಾಗಿದೆ, ಆತ ರಾಜಸ್ಥಾನದ ಆಳ್ವಾರ್ ಜಿಲ್ಲೆಯ ಚಂದ್ ಬಾಸ್ ಚಿರ್ ಖಾನಾ ಗ್ರಾಮದ ನಿವಾಸಿ. ಆಳ್ವಾರ್ ಹಾಗೂ ಭರತಪುರ ಜಿಲ್ಲೆಗಳು ಸೈಬರ್ ವಂಚಕರ ಕೇಂದ್ರಗಳಾಗಿದ್ದರೆ, ಅಲ್ಲಲ್ಲಿ ಗುಂಪುಗಳಾಗಿ ಕೂತು ಆನ್‌ಲೈನ್ ವಂಚನೆ ನಡೆಸುತ್ತಿರುವ ಬಗ್ಗೆ ತನಿಖೆಯಲ್ಲಿ ಬಹಿರಂಗವಾಗಿದೆ.

ಪೊಲೀಸ್ ಅಧಿಕಾರಿ ಹೆಸರು ಬಳಸಿ ವಂಚನೆ

ಆರೋಪಿ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರ ನಕಲಿ ಸಬ್‌ಬುಕ್ ಖಾತೆಯನ್ನು ಸೃಷ್ಟಿಸಿ, ನನ್ನ ಪರಿಚಯದ ಇನ್‌ಸ್ಪೆಕ್ಟರ್ ವರ್ಗಾವಣೆಯಾಗಿದೆ. ಅವರ ಏಸಿ, ಮಂಚ, ಫ್ರಿಡ್ಜ್ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಮೆಸೇಜ್ ಕಳುಹಿಸಿ ಜನರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದಾರೆ. ಈ ವಂಚನೆಯನ್ನು ನಂಬಿ ರಾಯಚೂರಿನ ನಿವಾಸಿ ರಮೇಶ್ ಹಣ ಕಳೆದುಕೊಂಡಿದ್ದರು. ಈ ಸಂಬಂಧ ಜೂನ್ ತಿಂಗಳಲ್ಲೇ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಪತ್ತೆ ಹಚ್ಚುವ ವೇಳೆ ಸಿನೆಮಾ ಶೈಲಿಯಲ್ಲಿ ಅಪರಿಚಿತರಂತೆ ಚಾಣಾಕ್ಷತನದಿಂದ ಆತನನ್ನು ಲಾಕ್ ಮಾಡಲಾಗಿದೆ. ಆರೋಪಿ ನೀಡಿದ ಮಾಹಿತಿ ಆಧಾರದಲ್ಲಿ, ಇತರ ಸಹಚರರನ್ನು ಬಂಧಿಸಲು ಮತ್ತೊಮ್ಮೆ ರಾಜಸ್ಥಾನಕ್ಕೆ ತೆರಳಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ರಾಯಚೂರು ಸೈಬರ್ ಅವರನ್ನು ಬಂಧಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *