Headlines

ಕರೆಂಟ್​​ ಶಾಕ್​​ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು

ಕರೆಂಟ್​​ ಶಾಕ್​​ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು


ರಾಯಚೂರು, ಜನವರಿ 31: ನೀರು ತರಲು ಹೋದಾಗ ವಾಟರ್ ಪ್ಯೂರಿಫೈರ್ ಸ್ವಿಚ್‌ನಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ಕರೆಂಟ್ ಶಾಕ್‌ಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಶಾಮಣ್ಣ ಎಂಬವರ ಪುತ್ರಿಯಾಗಿರುವ ತನುಶ್ರೀ (11) ಮೃತ ದುರ್ದೈವಿ. ಶಿಕ್ಷಕರೊಬ್ಬರು ಬಾಟಲ್‌ನಲ್ಲಿ ನೀರು ತುಂಬಿಸಿಕೊಂಡು ಬರಲು ಹೇಳಿದ ಕಾರಣ ಆಕೆ ವಾಟರ್ ಪ್ಯೂರಿಫೈರ್ ಬಳಿ ತೆರಳಿದ್ದರು.

ಗ್ರಾಮದ ಕಿರಿಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ ತನುಶ್ರೀ, ಓದಿನಲ್ಲಿಯೂ ಜಾಣೆಯಾಗಿದ್ದರು. ಒಂದು ದಿನವೂ ತಪ್ಪಿಸದೆ ಶಾಲೆಗೆ ತೆರಳುತ್ತಿದ್ದಳು. ಶಿಕ್ಷಕರು ಹೇಳಿದ್ದಾರೆ ಎಂದು ನೀರು ತರಲು ಹೋದ ಈಕೆ ವಾಟರ್ ಪ್ಯೂರಿಫೈರ್ ಸ್ವಿಚ್ ಆನ್ ಮಾಡಿದ್ದಾಳೆ. ಆ ವೇಳೆ ಬಾಲಕಿಯ ಎಡಗೈಗೆ ವಿದ್ಯುತ್ ಶಾಕ್ ತಗುಲಿದೆ, ಅಲ್ಲೇ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಶಿಕ್ಷಕರು ಕೂಡಲೇ ಸ್ಥಳೀಯ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸುವ ಯತ್ನ ಮಾಡಿದ್ದಾರೆ. ವೈದ್ಯರು ತನುಶ್ರೀ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ ಕಾರಣ ಸಿಂಧನೂರು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆ ಆಸ್ಪತ್ರೆಯೇ ಆಯ್ಕೆಯಾಗಿದ್ದಾಳೆ.

ಇದನ್ನೂ ಓದಿ: ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ

ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ನಿತೀಶ್ ಕೆ., ಸಿಂಧನೂರು ತಹಶಿಲ್ದಾರ್ ಅವರಿಗೆ ಸೂಚಿಸಲಾಗಿದೆ. ಬಿಐಒ, ತಹಶೀಲ್ದಾರ್, ಜೆಸ್ಕಾಂ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡಲಿದ್ದಾರೆ, ಅದರ ಆಧಾರದಲ್ಲಿ ತಪ್ಪಿತಸ್ಥ ಶಾಲಾ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಉಳಿದ ಶಾಲೆಗಳಲ್ಲಿ ವಿದ್ಯುತ್ ಸಮಸ್ಯೆಗಳಿದ್ದರೆ ತಕ್ಷಣ ಪರಿಶೀಲಿಸಿ ಕ್ರಮಕ್ಕೆ ಸೂಚಿಸಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡೋ ಭರವಸೆ ಜಿಲ್ಲಾಧಿಕಾರಿಗಳಿಂದ ಸಿಕ್ಕಿದೆ. ಇನ್ನು ಘಟನಾ ಸ್ಥಳಕ್ಕೆ ತುರ್ವಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತಳ ತಂದೆ ಶಾಮಣ್ಣ ನೀಡಿದ ದೂರಿನನ್ವಯ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *