ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ


ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆ, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆ ಸುರಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ, ಬಸವಕಲ್ಯಾಣ, ಹುಲಸೂರು ಸೇರಿದಂತೆ ಹಲವೆಡೆ ಉತ್ತಮ ಮಳೆ ಸುರಿದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *