Headlines

‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ

‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ


'ಪೆದ್ದಿ' ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ

ರಾಮ್ ಚರಣ್ (ರಾಮ್ ಚರಣ್) ನಟನೆಯ ‘ಪೆದ್ದಿ’ ಸಿನಿಮಾದ ಕುರಿತು ಸಾಕಷ್ಟು ಊಹಾಪೋಹಗಳು, ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಾರ್ಚ್ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಪದೇ ಪದೇ ಬಿಡುಗಡೆಯಾಗುತ್ತಲೇ ಬರುತ್ತಿದೆ. ಇದೀಗ ಸಿನಿಮಾ ಏಪ್ರಿಲ್ 30 ರಂದು ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಇದು ಸಹ ಸುಳ್ಳಾಗಲಿದೆ, ಸಿನಿಮಾ ಮತ್ತೆ ಮುಂದೂಡಲ್ಪಡುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಬಿಡುಗಡೆಯಾದ ‘ಪೆದ್ದಿ’ ಪೋಸ್ಟರ್‌ನಲ್ಲಿ ಬಿಡುಗಡೆಯಾದ ದಿನಾಂಕವೇ ಇಲ್ಲದಿರುವುದು ಇನ್ನಷ್ಟು ಅನುಮಾನಗಳನ್ನು ಮೂಡಿಸಿದೆ. ಇದೀಗ ನಟ ರಾಮ್ ಚರಣ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ರಾಮ್ ಚರಣ್ ಅವರ ಚಿಕ್ಕಪ್ಪ ನಾಗಬಾಬು ಅವರ ಪುತ್ರಿ ನಿಹಾರಿಕಾ ಸಿನಿಮಾ ನಿರ್ಮಾಪಕಿ ಆಗಿದ್ದು, ‘ರಾಕಾಸ’ ಹೆಸರಿನ ತೆಲುಗು ಹಾರರ್-ಕಾಮಿಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ರಾಕಾಸ’ ತಂಡವನ್ನು ರಾಮ್ ಚರಣ್ ಇತ್ತೀಚೆಗೆ ಭೇಟಿಯಾಗಿದ್ದರು. ಈ ವೇಳೆ ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದ ಚಿತ್ರೀಕರಣದ ಬಗ್ಗೆಯೂ ಅಪ್‌ಡೇಟ್ ಮಾಡಿದ್ದಾರೆ.

ರಾಮ್ ಚರಣ್ ಅವರು ಎರಡು ದಿನದ ಹಿಂದೆ ‘ರಾಕಾಸ’ ಸಿನಿಮಾ ತಂಡವನ್ನು ಭೇಟಿ ಮಾಡಿದ್ದರು. ಆ ದಿನ ಚಿತ್ರತಂಡದೊಂದಿಗೆ ಮಾತನಾಡುತ್ತಾ, ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದೆ. ಆದರೆ ಇನ್ನು ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ ಎಂದು ಸಹ ಹೇಳಿದ್ದು, ‘ಸಿನಿಮಾದ ದಿನಾಂಕದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿರುವುದನ್ನು ಗಮನಿಸಿದ್ದೇನೆ. ಯಾವುದೇ ಆತಂಕ ಬೇಡ, ನಾವು ಅಂದುಕೊಂಡ ಸಮಯಕ್ಕೆ ಸಿನಿಮಾ ಮುಗಿಯಲಿದೆ’ ಎಂದು ರಾಮ್ ಚರಣ್ ಹೇಳಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಪೆದ್ದಿ’ ಸಿನಿಮಾವು ಹಳ್ಳಿಯ ಕ್ರಿಕೆಟ್ ಆಟಗಾರ ಹಾಗೂ ಕುಸ್ತಿ ಪೈಲ್ವಾನನ ಕಥೆಯನ್ನು ಒಳಗೊಂಡಿದೆ. ‘ಉಪ್ಪೆನ’ ಸಿನಿಮಾ ಖ್ಯಾತಿಯ ಬುಚ್ಚಿಬಾಬು ಸನಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಅವರು ಕುಸ್ತಿ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಸಿನಿಮಾದ ನಾಯಕಿ ಬಾಲಿವುಡ್ ಬೆಡಗಿ ಜಾನ್ಹವಿ ಕಪೂರ್. ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ. ಸಿನಿಮಾ ಏಪ್ರಿಲ್ 30ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *