ಬೆಳಗಾವಿ, ನವೆಂಬರ್ 24: ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಹೆಚ್.ಡಿ. ದೇವೇಗೌಡಆರೋಪವನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಲು ಮೂಲ ಕಾರಣ ಡಿ.ಕೆ ಶಿವಕುಮಾರ್ ಎಂದಿರುವ ಜಾರಕಿಹೊಳಿ, ಆಪರೇಷನ್ ಕಮಲದ ಸೂತ್ರಧಾರ ನಾನೇ ಆಗಿದ್ದೆ. ಸಿದ್ದರಾಮಯ್ಯನವರಿಗೆ ಈ ವಿಚಾರ ಯಾವ ರೀತಿ ಸಂಬಂಧವಿರಲಿಲ್ಲ. ಡಿ.ಕೆ. ಶಿವಕುಮಾರ್ ಅವರ ಬೆಳಗಾವಿ ರಾಜಕೀಯ ಹಸ್ತಕ್ಷೇಪವೇ ಸರ್ಕಾರ ಪತನಕ್ಕೆ ಕಾರಣ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.