ಅಶ್ಲೀಲ ಕಮೆಂಟ್ ಪ್ರಕರಣ: ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ

ಅಶ್ಲೀಲ ಕಮೆಂಟ್ ಪ್ರಕರಣ: ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ


ಅಶ್ಲೀಲ ಕಮೆಂಟ್ ಪ್ರಕರಣ: ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲಾ ಕಮೆಂಟ್ ಮತ್ತು ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ (ರಮ್ಯಾ ದಿವ್ಯ ಸ್ಪಂದನ) ಅವರು ಕಾನೂನು ಸಮರ ಸಾರಿದ್ದಾರೆ. ಆ ಪ್ರಕರಣದ ವಿಚಾರಣೆ ಇಂದು (ಮಾರ್ಚ್ 10) ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ತೋರಿಸಿದ್ದಾರೆ. ‘ಇವತ್ತು ಸಾಕ್ಷಿ ನೀಡಬೇಕಿತ್ತು. ಕ್ರಾಸ್ ಎಕ್ಸಾಮಿನೇಷನ್‌ಗೆ ಮುಂದಿನ ದಿನಾಂಕದಂದು ಕರೆದಿದ್ದಾರೆ. ನನಗೆ ಈ ಕೇಸ್ ಮಾಡಬೇಕು ಅಂತ ಆಸೆ ಇಲ್ಲ. ಆರೋಪಿಗಳನ್ನು ನೋಡಿದರೆ ಬೇಜಾರಾಗುತ್ತದೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ತುಂಬಾ ಕಿರುಕುಳ ಇದೆ. ಅದನ್ನು ನಿಲ್ಲಿಸಬೇಕು. ಹೆಣ್ಮಕ್ಕಳಿಗೆ ರಕ್ಷಣೆ ಇದೆ. ಆ ಕಾರಣಕ್ಕಾಗಿ ಕೇಸ್ ಹಾಕಿದ್ದೇನೆ’ ಎಂದ ರಮ್ಯಾ (ರಮ್ಯಾ) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *