
ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (ರಮ್ಯಾ ದಿವ್ಯ ಸ್ಪಂದನ) ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭವಾಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘ಈ ಪ್ರಕರಣದಲ್ಲಿ ಜಡ್ಜ್ ಏನು ತೀರ್ಪು ತೆಗೆದುಕೊಳ್ಳುತ್ತದೆ ಅವರ ಮೇಲೆ ಒಂದು ಮಾದರಿ ನಿರ್ಮಾಣವಾಗುತ್ತದೆ. ಆಗ ಒಂದು ಜನರಿಗೆ ಭಯ ಬರುತ್ತದೆ. ಅಂಥ ಕಮೆಂಟ್ ಮಾಡುವುದಕ್ಕೂ ಮುಂಚೆ ಯೋಚನೆ ಮಾಡುತ್ತಾರೆ. ಏಕೆಂದರೆ, 2 ವರ್ಷದಿಂದ 7 ವರ್ಷಗಳ ಜೈಲು ಶಿಕ್ಷೆ ಆಗಬಹುದು. ಅವರು ಸಾಮಾನ್ಯವಾಗಿ ಟ್ರೋಲ್ ಮಾಡಿಲ್ಲ. ಮಕ್ಕಳನ್ನೂ ಸೇರಿಸಿ ಟ್ರೋಲ್ ಮಾಡಿದ್ದಾರೆ. ಹೆಂಡ್ತಿ, ಪೊಲೀಸರ ಎದುರಲ್ಲೇ ರೇಪ್ ಮಾಡುತ್ತಾರೆ, ಕೊಲೆ ಮಾಡುತ್ತಾರೆ ಅಂತ ಹೇಳಿದ್ದಾರೆ. ಇದನ್ನು ನಾನು ಸುಮ್ಮನೆ ಬಿಟ್ಟರೆ ಸಾಮಾನ್ಯ ಹೆಣ್ಣು ಮಕ್ಕಳ ಪರಿಸ್ಥಿತಿ ಏನಾಗುವುದು’ ಎಂದ ರಮ್ಯಾ (ರಮ್ಯಾ) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.