ಬೆಂಗಳೂರು: ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬರುವ ಐಪಿಎಲ್ ಟೂರ್ನಿಯನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ ಆಡುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತಾದ ಮಹತ್ವದ ಅಪ್ಡೇಟ್ಸ್ ಇಲ್ಲಿದೆ ನೋಡಿ

ಹಾಲಿ ಚಾಂಪಿಯನ್ ಆರ್ಸಿಬಿ ತಂಡ 2026ರ ಐಪಿಎಲ್ನಲ್ಲಿ ತನ್ನ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಡುವ ಬಗ್ಗೆ ಫ್ರಾಂಚೈಸಿ ಸುಳಿವು ನೀಡಿದೆ.

ಸೋಮವಾರ ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಫ್ರಾಂಚೈಸಿಯು ಫೋಟೋವೊಂದನ್ನು ಪೋಸ್ಟ್ ಮಾಡಿದೆ. ತಾನು ಗೆದ್ದಿರುವ ಐಪಿಎಲ್ ಹಾಗೂ ಡಬ್ಲ್ಯುಪಿಎಲ್ ಟ್ರೋಫಿಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಟ್ಟು, ಅದರಲ್ಲಿ ‘ಚಾಂಪಿಯನ್ಗಳ ತವರು’ ಎಂದು ಬರೆದಿರುವ ಫೋಟೋವೊಂದನ್ನು ಹಂಚಿಕೊಂಡಿದೆ.

‘ನಮ್ಮ ಹೃದಯ ಇರುವ ಸ್ಥಳವೇ ಮನೆ’ ಎಂಬ ಅಡಿಬರಹವನ್ನೂ ಕೊಡಲಾಗಿದೆ. ಇದು ಭಾರೀ ವೈರಲ್ ಆಗಿದ್ದು, ಆರ್ಸಿಬಿ ತನ್ನ ಪಂದ್ಯಗಳನ್ನು ಚಿನ್ನಸ್ವಾಮಿಯಲ್ಲೇ ಆಡುವ ಬಗ್ಗೆ ಸುಳಿವು ನೀಡಿದೆ ಎಂದು ಹಲವರು ವಿಶ್ಲೇಷಿಸಿದ್ದಾರೆ.

Home is where our heart is. ❤️ pic.twitter.com/FbTsX39DQt

— Royal Challengers Bengaluru (@RCBTweets) March 2, 2026

ಕಳೆದ ಜೂನ್ನಲ್ಲಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದಾಗಿ ಆರ್ಸಿಬಿಯು ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡುವ ಬಗ್ಗೆ ಗೊಂದಲದಲ್ಲಿದೆ. ರಾಜ್ಯ ಸರ್ಕಾರ ಈಗಾಗಲೇ ಪಂದ್ಯಕ್ಕೆ ಅನುಮತಿ ನೀಡಿದ್ದರೂ, ಆರ್ಸಿಬಿ ತನ್ನ ನಿರ್ಧಾರ ಪ್ರಕಟಿಸಿಲ್ಲ.

ಕಳೆದ ಜೂನ್ 04ರಂದು ಆರ್ಸಿಬಿ ಸಂಭ್ರಮಾಚರಣೆಯನ್ನು ಕಣ್ತುಂಬಿಕೊಳ್ಳಲು ವಿಧಾನಸೌಧ ಹಾಗೂ ಎಂ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಮುತ್ತ ಏಕಕಾಲದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.

ಇದೀಗ 2026ನೇ ಸಾಲಿನ ಐಪಿಎಲ್ ಟೂರ್ನಿಯು ಇದೇ ಮಾರ್ಚ್ 28ರಿಂದ ಆರಂಭವಾಗಲಿದ್ದು, ಫೈನಲ್ ಪಂದ್ಯವು ಮೇ 31ರಂದು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬದ್ದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲವೇ ಕಳೆದ ಆವೃತ್ತಿಯ ರನ್ನರ್-ಅಪ್ ಪಂಜಾಬ್ ಕಿಂಗ್ಸ್ ತಂಡದ ಎದುರು ಕಣಕ್ಕಿಳಿಯುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ.

Source link
2026ರ ಐಪಿಎಲ್ ಟೂರ್ನಿಗೂ ಮುನ್ನ ಆರ್ಸಿಬಿ ಫ್ಯಾನ್ಸ್ಗೆ ಸಿಹಿ ಸುದ್ದಿ! ಮಹತ್ವದ ಅಪ್ಡೇಟ್ಸ್ ಹಂಚಿಕೊಂಡ ಬೆಂಗಳೂರು ಫ್ರಾಂಚೈಸಿ