ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನಾ ಸಮಾವೇಶದ ಸ್ಥಳ ಪರಿಶೀಲಿಸಿದರು.
ಬೆಳಗಾವಿ, ಡಿಸೆಂಬರ್ 9: ಚಳಿಯ ನಡುವೆಯೂ ಬೆಳಗಾವಿ ಅಧಿವೇಶನದಲ್ಲಿ (ಬೆಳಗಾವಿ ಅಧಿವೇಶನ) ಇವತ್ತಿನಿಂದ ಕಾವು ಏರುವ ಸಾಧ್ಯತೆ ಇದೆ. ಸೋಮವಾರ ವಿಧಾನಪರಿಷತ್ನಲ್ಲಿ ಬೇರೆ ಬೇರೆ ವಿಚಾರಗಳು ಸ್ವಲ್ಪ ಸದ್ದು ಮಾಡಿದವು. ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಷ್ಟೇ ವಿಧಾನಸಭೆ ಕಲಾಪ ಸೀಮಿತವಾಗಿತ್ತು. ಆದರೆ ಇಂದಿನಿಂದ ಅಸಲಿ ಚರ್ಚೆ ಶುರುವಾಗಿದೆ. ಅದರಲ್ಲೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಬಿಜೆಪಿ ರೈತಾಸ್ತ್ರ ಬಿಡಲು ಮುಂದಾಗಿದೆ.
ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಪ್ರತಿಭಟನೆ. ಬೃಹತ್ ಪ್ರತಿಭಟನೆ ನಡೆಸುವ ಮೂಲಕ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಉತ್ತರ ಕರ್ನಾಟಕ ಚರ್ಚೆಗೆ ಪಟ್ಟು ಹಿಡಿದಿರುವ ಬಿಜೆಪಿ, ಸೋಮವಾರ ಬಿಎಸಿ ಸಭೆಯಲ್ಲಿ ನಿಲುವಳಿ ಸೂಚನೆ ನೀಡಿದೆ. ಕಬ್ಬು ಬೆಳೆಗಾರರು, ಮೆಕ್ಕೆಜೋಳ, ಭತ್ತ, ತೊಗರಿ ಬೆಳೆಗಾರರಿಗೆ ಅನ್ಯಾಯವಾಗಿದೆ. ಪ್ರವಾಹ ಪರಿಹಾರ, ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕ ಕಡೆಗಣನೆ ಹೀಗೆ ಹಲವು ವಿಚಾರ ಮುಂದಿಟ್ಟು ಸದನದ ಒಳಗೆ ಮತ್ತು ಹೊರಗೂ ಹೋರಾಟಕ್ಕೆ ಕರೆಕೊಟ್ಟಿದೆ.
ಸೋಮವಾರ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನಾ ಸಮಾವೇಶದ ಸ್ಥಳ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ. ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಶಾಸಕ ವಿಠ್ಠಲ ಹಲಗೇಕರ್, ಅಭಯ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ್ ಪಾಟೀಲ್, ಬೆಳಗಾವಿ ಜಿಲ್ಲಾಧ್ಯಕ್ಷ ಗೀತಾ ಸುತಾರ, ಬೆಳಗಾವಿ ಗ್ರಾಮಾಂತರ ಅಧ್ಯಕ್ಷ ಶ್ರೀ ಸುಭಾಷ್ ಪಾಟೀಲ್ ಮತ್ತು ಪ್ರಮುಖರು ಇದ್ದರು.
ನಂತರ ಮಾತನಾಡಿದ ಅಶೋಕ್, ರಾಜ್ಯದಲ್ಲಿ 240 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಜಾನೆ ಖಾಲಿಯಾಗಿದೆ. ಕಾಂಗ್ರೆಸ್ ನವರು ಜಾಲಿ ಜಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಸ್ಥಳದಲ್ಲಿ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಅನ್ನಭಾಗ್ಯ ಅಕ್ಕಿ ದುಬೈನಲ್ಲಿ ಮಾರಾಟವಾಗುತ್ತಿದ್ಯಾ? ಕಾಂಗ್ರೆಸ್-ಬಿಜೆಪಿ ಜಟಾಪಟಿ
ಮತ್ತೊಂದೆಡೆ, ಬಿಜೆಪಿ ನಾಯಕರ ಈ ಹೋರಾಟಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ.
ರೈತರೊಂದಿಗೆ ಬಿಜೆಪಿ ಪ್ರತಿಭಟನೆ ವೇಳೆ ದೊಡ್ಡ ಹಂಗಾಮವೇ ನಡೆಯುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ