Headlines

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ


ಜನವರಿ 26: ದೇಶದ ಸಂವಿಧಾನವನ್ನು ಅಂಗೀಕರಿಸಿದ ಸುದಿನ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶದ ಸೇನಾಬಲವನ್ನು ಜಗತ್ತಿಗೆ ಪ್ರದರ್ಶಿಸುವ ದಿನ ಮತ್ತೆ ಬಂದಿದೆ. ಗಣರಾಜ್ಯೋತ್ಸವ (ಗಣರಾಜ್ಯೋತ್ಸವ 2026) ದಿನದ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಶತಕೋಟಿ ಭಾರತೀಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಗೌರವ ಸಮರ್ಪಿಸಲು ಅಣಿಯಾಗಿದೆ. ನವೀನ ಕರ್ತವ್ಯಪಥ ಕೂಡ ಸಿದ್ಧವಾಗಿದೆ.

77ನೇ ಗಣರಾಜ್ಯೋತ್ಸವ: ಎಷ್ಟೊತ್ತಿಗೆ ಏನೇನು ಕಾರ್ಯಕ್ರಮ?

  • ಬೆಳಗ್ಗೆ 10:03 – ವಾರ್ ಮೆಮೋರಿಯಲ್ ನತ್ತ ಪ್ರಧಾನಿ ಮೋದಿ ಪ್ರಯಾಣ
  • ಬೆಳಗ್ಗೆ 10:05- ವಾರ್‌ ಮೆಮೋರಿಯಲ್‌ನಲ್ಲಿ ಪ್ರಧಾನಿ ನಮನ
  • ಬೆಳಗ್ಗೆ 10:22 – ಕರ್ತವ್ಯ ಪಥದಲ್ಲಿರುವ ಮುಖ್ಯವೇದಿಕೆಗೆ ಮೋದಿ ಆಗಮನ
  • ಬೆಳಗ್ಗೆ 10:25 – ವೇದಿಕೆಯತ್ತ ಉಪರಾಷ್ಟ್ರಪತಿ ರಾಧಾಕೃಷ್ಣನ್‌ ಆಗಮನ
  • ಬೆಳಗ್ಗೆ 10:25 – ಸ್ವಾಗತ ಸಂಗೀತದ ಮೂಲಕ ಗಣ್ಯರ ಬರಮಾಡಿಕೊಳ್ಳುವಿಕೆ
  • ಬೆಳಗ್ಗೆ 10:27 – ರಾಷ್ಟ್ರಪತಿಗಳ ಅಂಗರಕ್ಷಕ ಪಡೆಯೊಂದಿಗೆ ರಾಷ್ಟ್ರಪತಿಗಳ ಆಗಮನ
  • ಬೆಳಗ್ಗೆ 10:30 – ರಾಷ್ಟ್ರಧ್ವಜಾರೋಹಣ, ರಾಷ್ಟ್ರಗೀತೆ & 21 ಕುಶಾಲತೋಪುಗಳ ಗೌರವ
  • ಬೆಳಗ್ಗೆ 10:31 – ಕರ್ತವ್ಯಪಥದಲ್ಲಿ ಭವ್ಯ ಗಣರಾಜ್ಯೋತ್ಸವ ಪರೇಡ್ ಅಧಿಕೃತ ಆರಂಭ
  • ಮಧ್ಯಾಹ್ನ 12:08 – ಗಣರಾಜ್ಯೋತ್ಸವ ಪರೇಡ್ ಪರೇಡ್ ಮುಕ್ತಾಯ

ಗಣರಾಜ್ಯೋತ್ಸವ ಅತಿಥಿ ಯಾರು?

ಈ ಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿ ಯೂರೋಪಿಯನ್ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಭಾಗವಹಿಸಲಿದ್ದಾರೆ.

ವಂದೇಮಾತರಂ ಗೀತೆಗೆ 150ನೇ ವರ್ಷಾಚರಣೆ

ಈ ವರ್ಷದ ಗಣರಾಜ್ಯೋತ್ಸವವು ವಂದೇಮಾತರಂ ಗೀತೆಯ 150ನೇ ವರ್ಷ ಪೂರೈಸಿದ ಐತಿಹಾಸಿಕ ಕ್ಷಣಕ್ಕೂ ಸಾಕ್ಷಿಯಾಗಲಿದೆ. ಇನ್ನು, ಪಥಸಂಚಲನದಲ್ಲಿ ಭಾರತದ ಸಾಂಸ್ಕೃತಿಕ ಮತ್ತು ಸೇನಾಶಕ್ತಿ ಅನಾವರಣಗೊಳ್ಳಲಿದೆ.

ಗಣರಾಜ್ಯೋತ್ಸವ ಪಥಸಂಚಲನದ ವಿಶೇಷಗಳೇನು?

ಈ ಬಾರಿಯ ಪಥಸಂಚಲನದಲ್ಲಿ ಆಪರೇಷನ್ ಸಿಂಧೂರ್ ರಚನೆಯನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿದೆ. ಇದರಲ್ಲಿ ಎರಡು ರಫೇಲ್ ಜೆಟ್‌ಗಳು, ಎರಡು Su-30 ವಿಮಾನಗಳು, ಎರಡು MiG-29 ಯುದ್ಧಗಳು ಮತ್ತು ಒಂದು ಜಾಗ್ವಾರ್ ಯುದ್ಧ ವಿಮಾನಗಳು ಇವೆ. ಪಥಸಂಚಲನದಲ್ಲಿ 30 ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ‘ಸ್ವಾತಂತ್ರ್ಯದ ಮಂತ್ರ, ವಂದೇ ಮಾತರಂ’ ಮತ್ತು ‘ಸಮೃದ್ಧಿಯ ಮಂತ್ರ, ಆತ್ಮನಿರ್ಭರ ಭಾರತ’ ಎಂಬುದು ಈ ಬಾರಿಯ ಮುಖ್ಯ ವಿಷಯದ ವಸ್ತು. ಜೊತೆಗೆ 2,500 ಸಾಂಸ್ಕೃತಿಕ ಕಲಾವಿದರು ಕರ್ತವ್ಯ ಪಥದಲ್ಲಿ ವಂದೇ ಮಾತರಂ ಮತ್ತು ಸ್ವಾವಲಂಬಿ, ಅಭಿವೃದ್ಧಿ ಹೊಂದಿದ ಭಾರತದ ಧ್ವನಿಯ ಬಗ್ಗೆ ಪ್ರದರ್ಶನ ನೀಡಲಿದ್ದಾರೆ.

ಮೂ ಸ್ತಬ್ಧಚಿತ್ರಗಳ ಮೇಲೆ 17 ಸ್ತಬ್ಧಚಿತ್ರಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು 13 ಸ್ತಬ್ಧಚಿತ್ರಗಳು ಕೇಂದ್ರದ ವಿವಿಧ ಸಚಿವಾಲಯಗಳಿಂದ ಇರಲಿ. ಭಾರತೀಯ ವಾಯುಪಡೆಯ ಮಾಜಿ ಸೈನಿಕರನ್ನು ಒಳಗೊಂಡ ವಿಶೇಷ ಸ್ತಬ್ಧಚಿತ್ರವೂ ಇದೆ.

ಸಾಂಪ್ರದಾಯಿಕ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸ್ವದೇಶಿ 105 MM ಲೈಟ್ ಫೀಲ್ಡ್ ಗನ್‌ಗಳನ್ನು ಬಳಸಿ 21-ಸುತ್ತಿನ ಕುಶಾಲತೋಪು ಮೂಲಕ ಕಾರ್ಯಕ್ರಮ ಪ್ರಾರಂಭವಾಗಲಿದೆ. ವಿವಿಧ ಕ್ಷೇತ್ರಗಳಿಂದ ಸುಮಾರು 10,000 ವಿಶೇಷ ಅತಿಥಿಗಳು ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದರು. ವಿಶ್ವ ಅಥ್ಲೆಟಿಕ್ ಪ್ಯಾರಾ ಚಾಂಪಿಯನ್‌ಶಿಪ್ ವಿಜೇತರು, ಕೃಷಿಕರು, ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ, ಗಗನಯಾನ, ಚಂದ್ರಯಾನದಂತಹ ಇತ್ತೀಚಿನ ಇಸ್ರೋ ಯೋಜನೆಗಳಲ್ಲಿ ಭಾಗವಹಿಸಿದ ಅತ್ಯುತ್ತಮ ವೆಬ್‌ಸೈಟ್‌ಗಳು ಮತ್ತು ತಾಂತ್ರಿಕ ತಜ್ಞರು, ಮತ್ತು ಹೈಡ್ರೋಜನ್ ಉತ್ಪಾದನೆಗೆ ಪ್ರೋತ್ಸಾಹಧನ ಪಡೆದ ಕಂಪನಿಗಳ ಮುಖ್ಯಸ್ಥರು, ಸಿಐಒ ಮತ್ತು ಗೌರವ ಅತಿಥಿಗಳನ್ನು ಆಹ್ವಾನಿಸಲಾಗಿದೆ. ದೆಹಲಿಯಲ್ಲಿ ಹೆಜ್ಜೆಹೆಜ್ಜೆಗೂ ಕಣ್ಗಾವಲು ಇರಿಸಲಾಗಿದೆ.

ದೆಹಲಿಯಲ್ಲಿ 7ಸುತ್ತಿನ ಕೋಟೆ ಭದ್ರತೆ

  • 1 ಸಾವಿರಕ್ಕೂ ಹೆಚ್ಚು ಹೈಡೆಫಿನಿಷನ್ ಸಿಸಿ ಕ್ಯಾಮರಾ ಅಳವಡಿಕೆ
  • AI ತಂತ್ರಜ್ಞಾನದ ಕಣ್ಗಾವಲು ಇರಿಸುವ ಲೈವ್ ಕ್ಯಾಮರಾಗಳು
  • ಮುಖಚಹರೆಗಳನ್ನು ಪತ್ತೆ ಮಾಡುವ ಅತ್ಯಾಧುನಿಕ ಕ್ಯಾಮರಾಗಳು
  • 30ಕ್ಕೂ ಹೆಚ್ಚು ಕಂಟ್ರೋಲ್ ರೂಂಗಳಿಂದ ಲೈವ್ ಮಾನಿಟರ್
  • ದೃಶ್ಯಾವಳಿಗಳ ಮೇಲೆ ನಿಗಾ ಇರಿಸಲು 150ಕ್ಕೂ ಹೆಚ್ಚು ಸಿಬ್ಬಂದಿ
  • ಭದ್ರತಾ ಪಡೆಗಳಿಗೆ AI ತಂತ್ರಜ್ಞಾನದ ಗ್ಲಾಸ್‌ಗಳನ್ನು ಒದಗಿಸಲಾಗಿದೆ
  • ಪಥಸಂಚಲನ ಮಾರ್ಗದಲ್ಲಿ 10 ಸಾವಿರಕ್ಕೂ ಹೆಚ್ಚು ಪೊಲೀಸರು
  • ಗುಪ್ತಚರ ಸಿಬ್ಬಂದಿ ಸೇರಿದಂತೆ ಅರೆಸೇನಾಪಡೆ, ಸೇನಾಪಡೆ ಎಚ್ಚರಿಕೆ

ದೆಹಲಿಯ ಪ್ರಮುಖ ರಸ್ತೆಗಳನ್ನು ಬ್ಲಾಕ್ ಮಾಡಲಾಗಿತ್ತು, ಹಲವು ಮಾರ್ಗಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟಾರೆ ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 7:14 am, ಸೋಮ, 26 ಜನವರಿ 26



Source link

Leave a Reply

Your email address will not be published. Required fields are marked *