Headlines

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ


ನವೀನ/ಬೆಂಗಳೂರು,(ಜನವರಿ 24): ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿಯ ಇತ್ತೀಚಿನ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಧ್ವನಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸಲಾಗಿದೆ. ಆದರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ.

ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ ಚಿತ್ರ

ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆ ಸಂಕೇತವಾಗಿ ಗಣರಾಜ್ಯದ ಪರೇಡ್‌ನಲ್ಲಿ ‘ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಸಿದ್ಧಪಡಿಸಲಾಗಿದೆ. ಮಿಲೆಟ್ಸ್ ಟು ಮೈಕ್ರೋಚಿಪ್ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಹಾಗೂ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆಯ ಬಗ್ಗೆಯೂ ಟ್ಯಾಬ್ಲೋದಲ್ಲಿ ನಿರ್ಮಿಸಲಾಗಿದೆ.

ಇದನ್ನೂ ಓದಿ: ಮಿಲ್ಲೆಟ್ ಟು ಮೈಕ್ರೋಚಿಪ್: ಹೇಗಿರಲಿದೆ ಗೊತ್ತಾ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿರುವ ಕರ್ನಾಟಕದ ಸ್ತಬ್ಧಚಿತ್ರ?

ಕರ್ನಾಟಕವು ಕೃಷಿ ಕೈಗಾರಿಕೆ, ನಾವೀನ್ಯತೆ ಮತ್ತು ಸಂಸ್ಕೃತಿಯಲ್ಲಿ ಸಮತೋಲಿತ ಪ್ರಗತಿಯ ಮೂಲಕ ರಾಷ್ಟ್ರವನ್ನು ಸಮೃದ್ಧವಾಗಿ ಮತ್ತು ಸುಸ್ಥಿರ ಭವಿಷ್ಯದತ್ತ ಕೊಂಡೊಯ್ಯುತ್ತಿದೆ. ಆತ್ಮನಿರ್ಭರ ಭಾರತದ ದೃಷ್ಟಿಗೆ ಕರ್ನಾಟಕ ಸಮಗ್ರ ಕೊಡುಗೆ ನೀಡುತ್ತಿರುವುದು ಈ ಸ್ತಬ್ಧಚಿತ್ರದ ಸಂಕೇತವಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಈ ಸ್ತಬ್ಧಚಿತ್ರ ಪ್ರದರ್ಶಿಸುವ ಪ್ರಸ್ತಾಪ ಅಂಗೀಕೃತವಾಗದ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ ದುರದೃಷ್ಟಕರ ಸಂಗತಿ.

ಅವಕಾಶ ಸಿಗದಿರುವುದಕ್ಕೆ ಕಾರಣ ಕೊಟ್ಟ ಎಂಪಿ

ಈ ಬಗ್ಗೆ ಮೈಸೂರು ಬಿಜೆಪಿ ಸಂಸದ ಯದುವೀರ್ ಒಡೆಯರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸುತ್ತಿಲ್ಲ. ಸರಿಯಾಗಿ ಪತ್ರ ವ್ಯವಹಾರ ನಡೆದಿಲ್ಲ, ಗೊಂದಲವಾಗಿದೆ. ಈ ಬಾರಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ಕಾರಣ ಕೊಟ್ಟಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ

ಕರ್ನಾಟಕದ ಪ್ರತಿಯೊಬ್ಬ ಮತದಾರ ಸೂಕ್ಷ್ಮವಾಗಿ ಯೋಚಿಸಬೇಕು. ಬಿಜೆಪಿಗೆ ಮತ ಹಾಕಿದವರು ಯೋಚನೆ ಮಾಡಿ. ನಾಲಾಯಕ್ ಸಂಸದರು ನೋಡಬೇಕಾಗಿದೆ. ರಾಜ್ಯದ ಪರ ಧ್ವನಿ ಎತ್ತದ ಸಂಸದರು ನೋಡಿ ಜನವರಿ 26 ರಂದು ರಿಪಬ್ಲಿಕ್ ಡೇ ನಡೆಯುತ್ತೆ. 30 ಟ್ಯಾಬ್ಲೋಗಳಿಗೆ ಅವಕಾಶಗಳು. 17 ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಹೋಗುತ್ತವೆ. ಕೇರಳದ ಟ್ಯಾಬ್ಲೋ ಹೋಗ್ತಿದೆ. ಯಾಕಂದ್ರೆ ಚುನಾವಣೆ ಇದೆ.ತಮಿಳುನಾಡಿನಲ್ಲಿ ಚುನಾವಣೆ ಇದೆ ಅದರದ್ದು ಸಹ ನಡೆಯುತ್ತಿದೆ. ಪುದುಚೇರಿಯಲ್ಲು ಚುನಾವಣೆ ಇದೆ. ಅಲ್ಲಿ ಚುನಾವಣೆಗಳು ಇರುವುದಿರಿಂದ ಈ ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ನೀಡುತ್ತದೆ. ಆದರೆ ನಮ್ಮ ಟ್ಯಾಬ್ಲೋ ಸಿಕ್ಕಿಲ್ಲ. ಇದಾ ನೀವು ರಾಜ್ಯಕ್ಕೆ ಕೊಡುವ ಗೌರವ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗಣರಾಜ್ಯೋತ್ಸವದಂದು ದೆಹಲಿಯ ಕರ್ತವ್ಯ ಪಥದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ಮುಖ್ಯ ಅತಿಥಿಗಳ್ಯಾರು?

ಮಿಲೆಟ್ಸ್ ಟು ಮೈಕ್ರೋ ಚಿಪ್ ಟ್ಯಾಬ್ಲೋ ಇದೆ. ನಮ್ಮ ಕರ್ನಾಟಕದ್ದು,ಅದಕ್ಕೆ ಬಿಜೆಪಿಯವರು ಅಪಮಾನ ಮಾಡುತ್ತಿದ್ದಾರೆ. ಸೋಮಣ್ಣ ಬಿಜೆಪಿ ಅಧ್ಯಕ್ಷರಾಗೋಕೆ ನೋಡುತ್ತಿದ್ದಾರೆ. ಯತ್ನಾಳ್ ಅವರೇ ಓ ಅಂತ ಮಾತನಾಡುತ್ತೀರಲ್ಲ. ಇದರ ಬಗ್ಗೆ ನೀವು ಮಾತನಾಡಿ. ಅಶೋಕಣ್ಣ ನೀವು ಇದರ ಬಗ್ಗೆ ಮಾತನಾಡಿ. ತೇಜಸ್ವಿ ಸೂರ್ಯ ರನ್ನಿಂಗ್ ರೇಸ್ ನಲ್ಲಿದ್ದೀರ. ನಮ್ಮ ಟ್ಯಾಬ್ಲೋ ಬಗ್ಗೆ ಹೇಳಿ. ಇದರ ಬಗ್ಗೆ ನಾಲಾಯಕ್ ಎಂಪಿಗಳು ಹೇಳಲಿ ಎಂದು ಕಿರಿಕಾರಿದರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 2:29 pm, ಶನಿ, 24 ಜನವರಿ 26



Source link

Leave a Reply

Your email address will not be published. Required fields are marked *