
ಹೈದರಾಬಾದ್, ಮಾ.9: ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್ ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,” ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ. ನಮಗೆ ಬೆಂಗಳೂರು ಅಥವಾ ಮುಂಬೈ ನಗರಗಳು ಸ್ಪರ್ಧಿಯಲ್ಲ. ನಮ್ಮ ಸ್ಪರ್ಧೆ ಏನಿದ್ದರೂ ಸಿಂಗಾಪುರ ಮತ್ತು ಟೋಕಿಯೋದಂತಹ ಜಾಗತಿಕ ನಗರಗಳ ಜೊತೆಗೆ,” ಎಂದು ಅವರು ಪ್ರಕಟಿಸಿದ್ದಾರೆ.ಇದೀಗ ಈ ಹೇಳಿಕೆ ಕನ್ನಡಿಗರು ಮತ್ತು ಕರ್ನಾಟಕದ ರಾಜಕೀಯ ನಾಯಕರ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ