ಕೋಗಿಲು ನಿರಾಶ್ರಿತರಿಗೆ ವಸತಿ ನೀಡುವ ಬಗ್ಗೆ ಮಹತ್ವದ ಸಭೆ, ಕನ್ನಡಿಗರಿಗೆ ಮೊದಲ ಆದ್ಯತೆ, ಇನ್ನೂ ಹಲವು ವಿಚಾರ ಚರ್ಚೆ | Revenue Minister Krishna Byre Gowda Meeting About Kogilu Housing Issue Gow

ಸಭೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ವಿಚಾರವಾಗಿ ಸ್ಪಷ್ಟ ನಿಲುವು ಕೈಗೊಳ್ಳಲಾಗಿದೆ. ಸರ್ಕಾರಿ ಜಮೀನಿನಲ್ಲಿ ಯಾರಿಗಾದರೂ ಹಣ ನೀಡಿ ಒತ್ತುವರಿ ಮಾಡಿಸಿಕೊಂಡಿದ್ದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಅಲೆಮಾರಿಗಳು ತಾತ್ಕಾಲಿಕವಾಗಿ ಬಂದು ಹೋಗುವವರಾಗಿರುವುದರಿಂದ ಅವರಿಗೆ ಭೂ ಒತ್ತುವರಿ ಅಗತ್ಯವಿಲ್ಲ. ಆದರೆ, ಉದ್ದೇಶಪೂರ್ವಕವಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಸರ್ಕಾರಿ ಜಮೀನಿನಲ್ಲಿ ಶೆಡ್ ಹಾಕಿದ ತಕ್ಷಣ ಮನೆ ನೀಡುವುದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ. ಇದರಿಂದ ಸರ್ಕಾರವೇ ಪರೋಕ್ಷವಾಗಿ ಭೂ ಒತ್ತುವರಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈಗಾಗಲೇ ಸಾವಿರಾರು ಜನ ಸರ್ಕಾರಿ ಮನೆಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವಾಗ, ಒತ್ತುವರಿದಾರರಿಗೆ ಏಕಾಏಕಿ ಮನೆ ನೀಡುವುದು ನ್ಯಾಯಸಮ್ಮತವಲ್ಲ ಎಂದು ಸಚಿವರು ಹೇಳಿದರು.

Source link

Leave a Reply

Your email address will not be published. Required fields are marked *