Headlines

ಬೆಂಗಳೂರು: ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಮನೆಯಲ್ಲಿ ಕಳ್ಳತನ ಮಾಡಿದ ಝಮಾಟೊ ಡೆಲಿವರಿ ಬಾಯ್!

ಬೆಂಗಳೂರು: ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಮನೆಯಲ್ಲಿ ಕಳ್ಳತನ ಮಾಡಿದ ಝಮಾಟೊ ಡೆಲಿವರಿ ಬಾಯ್!


ಬೆಂಗಳೂರು, ಡಿ.13: ಗ್ರಾಮಿ ಪ್ರಶಸ್ತಿ ವಿಜೇತ, ಸಂಗೀತಗಾರ ರಿಕಿ ಕೇಜ್ (ಗ್ರ್ಯಾಮಿ ವಿಜೇತ ರಿಕಿ ಕೇಜ್) ಅವರ ಬೆಂಗಳೂರಿನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ಝಮಾಟೊ ಡೆಲಿವರಿ ಬಾಯ್ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ರಿಕಿ ಕೇಜ್ ತಮ್ಮ ಮನೆಯ ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ಪೋಸ್ಟ್ ಅನ್ನು @zomato @zomatocareಗೆ ಟ್ಯಾಗ್ ಮಾಡಲಾಗಿದೆ. ಮನೆಯ ಹೊರಗೆ ಇರುವ ಸಂಪ್ ಕವರ್ ಕಳ್ಳತನ ಮಾಡಲಾಗಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಿಟಿ ಪೊಲೀಸರಿಗೆ ದೂರು ನೀಡಲಾಗಿದೆ. ರಿಕಿ ಕೇಜ್ ಅವರು ಈ ಪೋಸ್ಟ್‌ನಲ್ಲಿ ತಮ್ಮ ನಿವಾಸದ ಸಿಸಿಟಿವಿ ದೃಶ್ಯಾವಳಿಯೊಂದಿಗೆ ಬೆಂಗಳೂರಿನಲ್ಲಿ ನಡೆಯುವ ಕಳ್ಳತನದ ಬಗ್ಗೆಯೂ ಹೇಳಿದ್ದಾರೆ.

ಅವರು ಎಕ್ಸ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ನಮ್ಮ ಮನೆಯಲ್ಲಿ ದೊಡ್ಡ ಕಳ್ಳತನವಾಗಿದೆ. ನಿಮ್ಮ @zomato @zomatocare ಹುಡುಗ, ನಮ್ಮ ಸಂಪ್-ಕವರ್ ಅನ್ನು ಕದ್ದಿದ್ದಾರೆ ಎಂದು ಮೇಲ್ನೋಟಕ್ಕೆ ಈ ದೃಶ್ಯದಲ್ಲಿ ಕಾಣುತ್ತಿದೆ. ಸಂಜೆ 6 ಗಂಟೆಗೆ ಈ ಘಟನೆ ನಡೆದಿದೆ. 15 ನಿಮಿಷಕ್ಕೊಮ್ಮೆ ಮನೆಗೆ ಬಂದು ನೋಡಿದೆ. ನಂತರ ಎರಡು ಬೈಕ್‌ನಲ್ಲಿ ಬಂದು ಸಂಪ್ ಕವರ್ ಕದ್ದಿದ್ದಾರೆ” ಎಂದು ಹೇಳಿದರು. ರಿಕಿ ಕೇಜ್ ತಮ್ಮ ಎಕ್ಸ್ ಖಾತೆಯಲ್ಲಿ ಎರಡು ವಿಡಿಯೋಗಳನ್ನು ಹಾಗೂ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ನಂಬರ್ ಪ್ಲೇಟ್ ಸಹ ಇದೆ. ಕೆಂಪು ಹೊಂಡಾ ಆಕ್ಟಿವಾ ಎಂದು ಹೇಳಲಾಗಿದೆ.

ಇಲ್ಲಿದೆ ನೋಡಿ ಎಕ್ಸ್ ಖಾತೆ ವಿಡಿಯೋ:

ಇನ್ನು ರಿಕಿ ಕೇಜ್ ಹಂಚಿಕೊಂಡಿರುವ ಪೋಸ್ಟ್ ನಲ್ಲಿ ಕಳ್ಳರನ್ನು ಮತ್ತೆ ಮಾಡಲು ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ. ಇದರೊಂದಿಗೆ ಜನರಿಗೂ ಎಚ್ಚರದಿಂದ ಇರುವಂತೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂತಹ ಘಟನೆಗಳು ಹೆಚ್ಚು ನಡೆಯುತ್ತಿದೆ, ಜಾಗರೂಕರಾಗಿರಿ ಎಂದು ಹೇಳಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನೆಟ್ಟಿಗರು ಕೂಡ ಈ ಕೃತ್ಯ ಮಾಡಿದವರನ್ನು ತಕ್ಷಣವೇ ಪತ್ತೆ ಮಾಡುವಂತೆ ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ: ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಪ್ರಕರಣ

ಜೊಮ್ಯಾಟೊ ಪ್ರತಿಕ್ರಿಯಿ:

ರಿಕಿ ಕೇಜ್ ಹಂಚಿಕೊಂಡಿರುವ ಪೋಸ್ಟ್‌ಗೆ ಝಮಾಟೊ ಕೂಡ ಪ್ರತಿಕ್ರಿಯೆ ನೀಡಿದೆ. ಝಮಾಟೊ ಹೀಗೆ ಹೇಳಿದೆ. “ಹಾಯ್ ರಿಕಿ, ಇದು ನಿಜವಾಗಿಯೂ ಕಳವಳಕಾರಿಯಾಗಿದೆ, ಮತ್ತು ನಮ್ಮ ವಿತರಣಾ ಪಾಲುದಾರರಿಂದ ಅಂತಹ ನಡವಳಿಕೆಯನ್ನು ನಾವು ಪ್ರೋತ್ಸಾಹಿಸುವುದಿಲ್ಲ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ನಾವು ಕೂಡ ಈ ಬಗ್ಗೆ ತನಿಖೆ ನಡೆಸುತ್ತೇವೆ. ನಿಮ್ಮ ಮೊಬೈಲ್ ಡಿಎಂ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಲು ನಾವು ವಿನಂತಿಸುತ್ತೇವೆ” ಎಂದು ಹೇಳಿದರು.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *