ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ (ಜೈ ಹನುಮಾನ್) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆಬ್ರವರಿ 22) ಕರ್ನಾಟಕದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಇಡೀ ಚಿತ್ರತಂಡ ಆಗಮಿಸಿದೆ. ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕೂಡ ಆಗಮಿಸಿದ್ದಾರೆ. ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. ಈ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಅವರನ್ನು ನೋಡಲು ಅಂಜನಾದ್ರಿ ಬೆಟ್ಟದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರನ್ನು ನೋಡಿ ಜೈಕಾರ ಕೂಗಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.