‘ಕಾಂತಾರ: ಚಾಪ್ಟರ್ 1’ (ಕಾಂತಾರ: ಅಧ್ಯಾಯ 1) ಸಿನಿಮಾ ಮೂಲಕ ಭರ್ಜರಿ ಹಿಟ್ ನೀಡಿರುವ ರಿಷಬ್ ಶೆಟ್ಟಿ, ಇದೀಗ ಹೊಸದೊಂದು ಸಿನಿಮಾ ಶುರುವಾಗಿದೆ. ‘ಕಾಂತಾರ’ದಂಥಾ ಪೌರಾಣಿಕ ಹಿನ್ನೆಲೆಯುಳ್ಳ ಸಿನಿಮಾ ಮಾಡಿದ್ದ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಪೌರಾಣಿಕ ಕಥೆಯಲ್ಲಿಯೇ ನಾಯಕನಾಗಿ ನಟಿಸಲಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶುರುವಾಗುವ ಮುಂಚೆಯೇ ಘೋಷಣೆಯಾಗಿದ್ದ ‘ಜೈ ಹನುಮಾನ್’ ಸಿನಿಮಾ ಇದೀಗ ಪ್ರಾರಂಭವಾಗಿದೆ, ಶೀಘ್ರವೇ ಮುಹೂರ್ತದ ನಂತರ.
ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನದ ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ, ಸಿನಿಮಾದ ಮುಹೂರ್ತ ಫೆಬ್ರವರಿ22 ರಂದು ಹಂಪಿಯಲ್ಲಿ. ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ಆದರೂ ಸಿನಿಮಾದ ಮುಹೂರ್ತವನ್ನು ಹಂಪಿಯಲ್ಲಿ ನಡೆಸುತ್ತಿರುವ ಪ್ರಮುಖ ಕಾರಣವೂ ಇದೆ.
ಹಂಪಿಯು ಹನುಮಂತನ ಜನ್ಮಸ್ಥಳ ಎಂದು ನಂಬಲಾಗಿದೆ, ಈ ಕಾರಣದಿಂದಲೇ ಚಿತ್ರತಂಡವು ಈ ಪವಿತ್ರ ಸ್ಥಳವನ್ನು ಅಧಿಕೃತ ಚಾಲನೆಗೆ ಆಯ್ಕೆ ಮಾಡಿಕೊಂಡಿದೆ. ಫೆಬ್ರವರಿ 22 ರಂದು ನಡೆಯಲಿರುವ ಈ ಪೂಜಾ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ, ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ ಸೇರಿದಂತೆ ಚಿತ್ರದ ಪ್ರಮುಖ ಕಲಾವಿದರು ಮತ್ತು ತಾಂತ್ರಿಕ ವರ್ಗದವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ:ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ಹಂಚಿಕೊಂಡ ದಂಪತಿ
‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹನುಮಂತ ದೇವರ ಪಾತ್ರದಲ್ಲಿ ನಟಿಸುತ್ತಿದ್ದಾರೆ, ಸಿನಿಮಾದ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ‘ಪುಷ್ಪ’, ‘ಪುಷ್ಪ 2’ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು ಈ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅತ್ಯಂತ ದುಬಾರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ. ಪ್ರಶಾಂತ್ ವರ್ಮಾ ನಿರ್ದೇಶಿಸಿ ಸೂಪರ್ ಹಿಟ್ ಆಗಿದ್ದ ‘ಹನುಮ್ಯಾನ್’ ಸಿನಿಮಾದ ಮುಂದುವರಿದ ಭಾಗ ಎನ್ನಲಾಗುತ್ತಿದ್ದು, ಈ ಸಿನಿಮಾ ಸಂಪೂರ್ಣವಾಗಿ ಹನುಮಂತನ ಶಕ್ತಿ ಮತ್ತು ಸಾಹಸಗಳ ಮೇಲೆ ಕೇಂದ್ರೀಕೃತವಾಗಿರಲಿದೆ. ಕಲಿಯುಗದಲ್ಲಿ ಹನುಮಂತನ ಆಗಮನ ಹೇಗಿರುತ್ತದೆ ಎಂಬ ಕಲ್ಪನೆಯನ್ನು ನಿರ್ದೇಶಕ ಪ್ರಶಾಂತ್ ವರ್ಮ ತೆರೆಯ ಮೇಲೆ ತರಲಿದ್ದಾರೆ.
ಮೂಲಗಳ ಪ್ರಕಾರ, ಮುಹೂರ್ತ ಮುಗಿದ ಬಳಿಕ ಏಪ್ರಿಲ್ ತಿಂಗಳಿನಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಪ್ರಶಾಂತ್ ವರ್ಮ ಸ್ಕ್ರಿಪ್ಟ್ ಮತ್ತು ವಿಎಫ್‌ಎಕ್ಸ್ ಕೆಲಸಗಳಿಗಾಗಿ ಒಂದು ವರ್ಷಕ್ಕೂ ಹೆಚ್ಚು ಸಮಯ ವ್ಯಯಿಸಿದ್ದಾರೆ. ರಿಷಬ್ ಶೆಟ್ಟಿ ‘ಜೈ ಹನುಮಾನ್’ ಸಿನಿಮಾಗಾಗಿ ದೇಹವನ್ನು ಇನ್ನಷ್ಟು ಹುರಿಗೊಳಿಸಿದ್ದು, ಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಬಳಿಕ ಛತ್ರಪತಿ ಶಿವಾಜಿ ಜೀವನ ಆಧರಿತ ಹಿಂದಿ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ