Headlines

Rising Stars Asia Cup 2025: ಕತಾರ್​ಗೆ ಹಾರಿದ ಭಾರತ ಯುವ ಪಡೆ; ವಿಡಿಯೋ

Rising Stars Asia Cup 2025: ಕತಾರ್​ಗೆ ಹಾರಿದ ಭಾರತ ಯುವ ಪಡೆ; ವಿಡಿಯೋ


2025 ರ ರೈಸಿಂಗ್ ಸ್ಟಾರ್ ಏಷ್ಯಾಕಪ್ ನವೆಂಬರ್ 14 ರಂದು ಕತಾರ್‌ನ ದೋಹಾದಲ್ಲಿ ಪ್ರಾರಂಭವಾಗಲಿದೆ. ಹೀಗಾಗಿ ಈ ಆಯ್ಕೆಯಲ್ಲಿ ಭಾಗವಹಿಸಲು ತಿಲಕ್ ವರ್ಮಾ ನೇತೃತ್ವದ ಭಾರತ ಯುವ ತಂಡ ದೋಹಾಗೆ ಪ್ರಯಾಣ ಬೆಳೆಸಿದೆ. ಈ ತಂಡದಲ್ಲಿ ಯುವ ಸ್ಟಾರ್ ವೈಭವ್ ಸೂರ್ಯವಂಶಿ ಸೇರಿದಂತೆ ಭಾರತದ ಎ ತಂಡ ಈ ಪಂದ್ಯಾವಳಿಯಲ್ಲಿ ಆಡಲಿದೆ. ಇದೀಗ ತಂಡ ದೋಹಾಗೆ ತೆರಳಿರುವ ವಿಡಿಯೋವನ್ನು ಬಿಸಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಭಾರತದ

ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ ಭಾರತ ಎ ತಂಡವು ಒಮಾನ್, ಯುಇಐ ಮತ್ತು ಪಾಕಿಸ್ತಾನ ಎ ತಂಡಗಳೊಂದಿಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಭಾರತ ತಂಡವು ನವೆಂಬರ್ 14 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ನವೆಂಬರ್ 16 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ನವೆಂಬರ್ 18 ರಂದು ಒಮಾನ್ ತಂಡವನ್ನು ಎದುರಿಸಲಿದೆ. ನಂತರ ಎರಡು ಸೆಮಿಫೈನಲ್ ಪಂದ್ಯಗಳು ನವೆಂಬರ್ 21 ರಂದು ನಡೆಯಲಿದ್ದು, ಫೈನಲ್ ನವೆಂಬರ್ 23 ರಂದು.

ಭಾರತ ಎ ತಂಡ: ಜಿತೇಶ್ ಶರ್ಮಾ (ನಾಯಕ/ವಿಕೆಟ್-ಕೀಪರ್), ನಮನ್ ಧೀರ್ (ಉಪನಾಯಕ), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ನೇಹಾಲ್ ವಧೇರಾ, ಸೂರ್ಯಾಂಶ್ ಶೆಡ್ಗೆ, ರಮಣದೀಪ್ ಸಿಂಗ್, ಹರ್ಷ್ ದುಬೆ, ಅಶುತೋಷ್ ಶರ್ಮಾ, ಯಶ್ ಠಾಕೂರ್, ಗುರ್ಜಪ್ನೀತ್ ಸಿಂಗ್, ವಿಜಯ್ ಕುಮಾರ್ ವೈಶಾಕ್, ವಿಜಯ್ ಕುಮಾರ್ ಕೀಪರ್), ಸುಯಶ್ ಶರ್ಮಾ.

ಸ್ಟ್ಯಾಂಡ್‌ಬೈ ಆಟಗಾರರು: ಗುರ್ನೂರ್ ಸಿಂಗ್ ಬ್ರಾರ್, ಕುಮಾರ್ ಕುಶಾಗ್ರಾ, ತನುಷ್ ಕೋಟ್ಯಾನ್, ಸಮೀರ್ ರಿಜ್ವಿ, ಶೇಕ್ ರಶೀದ್.

ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *