ಆನೇಕಲ್, ಫೆಬ್ರವರಿ 22: ಬೆಂಗಳೂರು ಹೊರವಲಯದಲ್ಲಿ ಆಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ ನಡೆಸುತ್ತಿರುವ ವರದಿಯಾಗಿದೆ. ಆನೇಕಲ್‌ನ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದ್ದು, ಒಬ್ಬೊಬ್ಬರನ್ನು ಕರೆತರಲು ಆಯಂಬುಲೆನ್ಸ್‌ನ ಕಾರು ಚಾಲಕ ಮತ್ತು ಕೆಲ ವಿದ್ಯಾರ್ಥಿಗಳು ತಡೆದಿದ್ದಾರೆ. ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆಯಂಬುಲೆನ್ಸ್ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿದೆ. ಸುಮಾರು ಹದಿನೈದು ನಿಮಿಷಗಳ ಕಾಲ ಆಯಂಬುಲೆನ್ಸ್ ತಡೆದು ನಿಲ್ಲಿಸಿದೆ, ಆಯಂಬುಲೆನ್ಸ್ ಚಾಲಕನನ್ನು ಅಶ್ಲೀಲ ಪದಗಳಿಂದ ಬಾಯಿಗೆ ಬಂದಂತೆ ನಿಂದಿಸಲಾಗಿದೆ. ಜನರನ್ನು ಸಾಗಿಸುವ ತುರ್ತು ವಾಹನಕ್ಕೆ ಅಡ್ಡಿಪಡಿಸಿ, ಅದರ ಸಿಬ್ಬಂದಿಯನ್ನು ನಿಂದಿಸಿದ ಕಾರು ಚಾಲಕನ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಘಟನೆಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.