ದೇವನಹಳ್ಳಿ, ಜನವರಿ 5: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎಬಿ) ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್ ಬಳಿಯೇ ಸಿನಿಮಾ ರೋಡ್‌ರೇಜ್ ನಡೆದಿದೆ. ಕ್ಯಾಬ್ ಚಾಲಕ ಮತ್ತು ಬೈಕ್ ಸವಾರನ ನಡುವೆ ಉಂಟಾದ ಕಿರಿಕ್ ಏರ್‌ಪೋರ್ಟ್ ರಸ್ತೆಯಲ್ಲಿ ಕಾರು-ಬೈಕ್ ಚೇಸ್‌ಗೆ ತಿರುಗಿದ್ದು, ಭದ್ರತಾ ಸಿಬ್ಬಂದಿ ಮಧ್ಯ ಪ್ರವೇಶಿಸಿದ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ. ಬೈಕ್ ಸವಾರ ಕ್ಯಾಬ್ ಅನ್ನು ಸಿನಿಮಾವಾಗಿ ಹಿಂಬಾಲಿಸಿಕೊಂಡು ಹೋಗಿ, ಏರ್‌ಪೋರ್ಟ್ ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್ ಬಳಿ ಅಡ್ಡಗಟ್ಟಿ ಗಲಾಟೆ ನಡೆಸಿದ್ದಾನೆ. ಹಿಂಬದಿ ಬರುತ್ತಿದ್ದ ಮತ್ತೊಂದು ಕಾರಿನ ಚಾಲಕನ ಮೊಬೈಲ್ ಕ್ಯಾಮರಾದಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಆಗಿದೆ.
ಬೈಕ್ ಸವಾರ ಕ್ಯಾಬ್ ಅನ್ನು ಹಿಂಬಾಲಿಸಿ ಅಡ್ಡಗಟ್ಟಿದ ವೇಳೆ, ಕಾರಿನೊಳಗಿದ್ದ ಯುವತಿ ಭಯಭೀತಳಾಗಿದ್ದಾಳೆ. ನಡು ರಸ್ತೆಯಲ್ಲಿ ನಡೆದ ಈ ಗಲಾಟೆಯಿಂದ ಕೆಲಕಾಲ ವಾಹನ ಸಂಚಾರಕ್ಕೂ ಉಂಟಾಗಿದೆ. ಸ್ಥಳಕ್ಕೆ ಧಾವಿಸಿದ ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ಇಬ್ಬರಿಗೂ ಬುದ್ಧಿವಾದ ಹೇಳಿ, ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ. ಈ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣ ಪೊಲೀಸ್ ಠಾಣಾ ಸಂಭವಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ