ಬೆಂಗಳೂರಲ್ಲಿ ಸರ್ಕಾರಿ ಅಧಿಕಾರಿಗಳಿಂದ 200 ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತು ಕಬಳಿಕೆ ಆರೋಪ: ಲೋಕಾಯುಕ್ತಕ್ಕೆ ದೂರು

ಬೆಂಗಳೂರಲ್ಲಿ ಸರ್ಕಾರಿ ಅಧಿಕಾರಿಗಳಿಂದ 200 ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತು ಕಬಳಿಕೆ ಆರೋಪ: ಲೋಕಾಯುಕ್ತಕ್ಕೆ ದೂರು


ಬಿಜೆಪಿ ಮುಖಂಡ ಎನ್‌ಆರ್ ರಮೇಶ್ ಅವರಿಂದ ಲೋಕಾಯುಕ್ತಕ್ಕೆ ದೂರು

ಬೆಂಗಳೂರು, ಅಕ್ಟೋಬರ್ 16: ಬೆಂಗಳೂರಿನಲ್ಲಿ (ಬೆಂಗಳೂರು) ಸರ್ಕಾರಿ ಅಧಿಕಾರಿಗಳು 200 ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತು ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಉನ್ನತ ಹುದ್ದೆಯಲ್ಲಿರೋ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಲೋಕಾಯುಕ್ತ ಹಾಗೂ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ. ನಿಯಮವನ್ನು ಗಾಳಿಗೆ ತೂರಿ ಪ್ರಭಾವಿಗಳಿಗೆ ಸರ್ಕಾರಿ ಜಮೀನು ಮಾರಾಟ ಮಾಡಲಾಗಿದೆ. ಬೆಂಗಳೂರು ಡಿಸಿ ಕಚೇರಿಯ ಸಹಾಯಕರಿಂದ ಕಾನೂನು ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರು ಡಿಸಿ ಕಚೇರಿ ಸಹಾಯಕ ಪ್ರಶಾಂತ್ ಗೌಡ ಪಾಟೀಲ್ ವಿರುದ್ಧ ಇದೀಗ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಲ ಭ್ರಷ್ಟ ಅಧಿಕಾರಿಗಳು ಕೂಡ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಎಡಿಎಲ್ ಆರ್ ಸಚಿನ್, ಜೆಡಿಎಲ್ ಆರ್ ನಿಸ್ಸಾರ್ ಅಹಮದ್, ತಹಶೀಲ್ದಾರ್ ಶ್ರೀನಿವಾಸ್, ವಿಶೇಷ ತಹಶೀಲ್ದಾರ್ ನಾಗರಾಜ್, ಎಸಿ ರಜನೀಕಾಂತ್, ಆರ್ ಐ ನವೀನ್ ವಿರುದ್ಧವೂ ದೂರು ದಾಖಲಾಗಿದೆ. ಸರ್ಕಾರಿ ಜಮೀನು ಕಬಳಿಸಿರುವ ಆರೋಪದಲ್ಲಿ ಎಂ. ಮಂಜುನಾಥ್, ಆರ್. ಶೋಭ ಮಂಜುನಾಥ್, ಉಮೇಶ್ ಬಾಬು ಎಸ್. ಬಿ., ಜಲಜದಾಸ್ ಮತ್ತು ಬಿ. ಕೆ. ರಾಘವೇಂದ್ರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: ಮಧುಮೇಹಿಗಳಿಗೆ ಕೆಎಂಎಫ್ ದೀಪಾವಳಿ ಉಡುಗೊರೆ: ನಂದಿನಿ ಶುಗರ್ ಫ್ರೀ ಸಿಹಿತಿಂಡಿಗಳು ಮಾರುಕಟ್ಟೆಗೆ

ಬೆಂಗಳೂರು ಉತ್ತರಹಳ್ಳಿಯ ಯುಎಂ ಕಾವಲ್ ನ ಸರ್ವೆನಂ 18 ರಲ್ಲಿರುವ 35 ಚಿನ್ನಾಭರಣ 11 ಗುಂಟೆ ಜಮೀನು ಇದೀಗ ಅಕ್ರಮವಾಗಿ ಖಾಸಗಿ ವ್ಯಕ್ತಿ ಪಾಲಾಗಿದೆ. ಸಂಪೂರ್ಣವಾಗಿ ಸರ್ಕಾರಿ ‘ಎ’ ಮತ್ತು ‘ಬಿ’ ಕರಾಬು ಜಮೀನು ಪ್ರಭಾವಿಗಳ ಪಾಲಾಗಿದೆ. ಪ್ರಸ್ತುತ ಈ ಜಮೀನಿನಲ್ಲಿ ಎರಡು ವರ್ಷದಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಪೋಡಿ ಮಾಡಲಾಗಿದೆ. ಜಿಲ್ಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಅಧಿಕಾರಿಗಳು ಭೂ ಪರಿವರ್ತನೆ ಮಾಡಿದರು ಎಂದು ದಾಖಲೆ ಸಮೇತ ಬಿಜೆಪಿ ಮುಖಂಡ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *