
ತುಮಕೂರು, (ಅಕ್ಟೋಬರ್ 18): ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಸರ್ಕಾರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ (ಆರ್‌ಎಸ್‌ಎಸ್) ಚಟುವಟಿಕೆಗಳಿಗೆ ಮೂಗುದಾರ ಹಾಕಲು ಸಿದ್ದರಾಮಯ್ಯ ಸರ್ಕಾರ ಮೊನ್ನೆ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಂಡಿದೆ. ಇದರ ನಡುವೆಯೂ ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಿಂದಲೇ ಆರ್ ಎಸ್ ಎಸ್ ಗೀತೆ ಮೊಳಗಿದೆ. ಸರ್ಕಾರಿ ಮೈದಾನದಿಂದಲೇ ಪಥಸಂಚಲನವೂ ಸಹ ಶುರುವಾಗಿದೆ. ಈ ಪಥಸಂಚಲನದಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಪಾಲ್ಗೊಂಡಿದ್ದಾರೆ.