ಚಿಕ್ಕಬಳ್ಳಾಪುರ, ನವೆಂಬರ್ 16: ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದ ಬಳಿ ಕಾರ್ಯಾಚರಣೆ ನಡೆಸುತ್ತಿರುವ ಆರ್ ಟಿಒ ಅಧಿಕಾರಿಗಳು ಪರ್ಮಿಟ್ ಇಲ್ಲದೆ, ತೆರಿಗೆ ಕಟ್ಟದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ 10ಕ್ಕೂ ಹೆಚ್ಚು ಐಷಾರಾಮಿ ಖಾಸಗಿ ಬಸ್ಗಳನ್ನು ಸೀಜ್ ಮಾಡಲಾಗಿದೆ. ಹೈದರಾಬಾದ್ ಸೇರಿದಂತೆ ಬೇರೆ ಬೇರೆ ಸ್ಥಳಗಳಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸುಗಳನ್ನು ವಶಕ್ಕೆ ಪಡೆಯಲಾಗಿದೆ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ನಾಗಾಲ್ಯಾಂಡ್ ಅರುಣಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ನೋಂದಣಿ ಇರುವ ಬಸ್ಸುಗಳನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.