ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್​​ ಬಸ್​​

ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್​​ ಬಸ್​​


ಶಿವಮೊಗ್ಗ, ಜನವರಿ 28: ಚಿತ್ರದುರ್ಗದ ಬಳಿ ನಡೆದ ಬಸ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಹೊಸನಗರ ತಾಲೂಕಿನ ಸೂಡೂರು ಜಿಲ್ಲೆಯಲ್ಲಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಮುಂದಾದ ಚಾಲಕ ಮರಕ್ಕೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *