Headlines

ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್

ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್


ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್

ಕನ್ನಡ, ಹಿಂದಿ ಸೇರಿದಂತೆ ಭಾರತದ ಚಿತ್ರರಂಗದವರು ವಿದೇಶದಲ್ಲಿ ಶೂಟ್ ಮಾಡುತ್ತಾರೆ. ಅದರಲ್ಲಿ ಬಾಲ್ಡ್‌ನವರು ವಿದೇಶಿ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಈಗ ಅಚ್ಚರಿ ಎಂಬಂತೆ ರಷ್ಯಾದ ಚಿತ್ರವೊಂದು ಭಾರತದ ಬೀದಿಗಳಲ್ಲಿ ಶೂಟ್ ಆಗಿದೆ. ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಸಂಪೂರ್ಣವಾಗಿ ಭಾರತದ ಸಿನಿಮಾಗಳಿಂದ ಪ್ರೇರಿತವಾಗಿದೆ.

ಭಾರತ ಹಾಗೂ ರಷ್ಯಾ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ‘ಪರ್ಸಿಮನ್ ಆಫ್ ಲವ್’ ಎಂಬುದು ಚಿತ್ರದ ಹೆಸರು. ಪರ್ಸಿಮನ್ ಎಂದರೆ ಆರೆಂಜ್ ರೀತಿಯಲ್ಲೇ ಇರುವ ಒಂದುಹಣ್ಣು. ಭಾರತ ಹಾಗೂ ರಷ್ಯಾ ಒಟ್ಟಾಗಿ ನಿರ್ಮಿಸಿರುವ ಮೊದಲ ಸಿನಿಮಾ ಇದಾಗಿದೆ. ಈ ಸಿನಿಮಾ ಟ್ರೇಲರ್ ಮೂಲಕ ಗಮನ ಸೆಳೆದಿದೆ.

ಮಾರಿಯಸ್ ವೈಸ್ಬರ್ಗ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಾಲಿವುಡ್ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ಕಾಮಿಡಿ ಕ್ಲಬ್ ತಾರೆಯರಾದ ಡೆಮಿಸ್ ಕರಿಬಿಡಿಸ್ ಮತ್ತು ಮಿಖಾಯಿಲ್ ಗಲುಸ್ಟಿಯನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಅಡಿಲಾ ರಾಗಿಮೋವಾ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: 11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮ್ಯಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?

ಒಬ್ಬ ಪೊಲೀಸ್ ಅಧಿಕಾರಿ ಆದರೆ, ಯಾರಾದರೂ ಅಪರಾಧಿ. ಅವರ ಪೈಪೋಟಿಯು ದೀರ್ಘಕಾಲದವರೆಗೆ ಸಮಾಧಿಯಾಗಿ ಉಳಿದಿರುವ ಸತ್ಯದ ಆವಿಷ್ಕಾರಕ್ಕೆ ಕಾರಣವಾಗಿದೆ. ಬಾಲ್ಯದಲ್ಲಿ ಬೇರ್ಪಟ್ಟ ಒಡಹುಟ್ಟಿದವರು ಎಂಬ ವಿಷಯದ ನಂತರ ಹೊರ ಬರುತ್ತದೆ.

ಇದು ಭಾರತದಲ್ಲಿ ಶೇಟ್ ಆಗಿಲ್ಲ ಭಾರತದ ಪ್ರಮುಖ ನಗರಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಹಿಂದಿಗೆ ಡಬ್ ಮಾಡುವ ಪ್ಲ್ಯಾನ್ ಕೂಡ ಇದೆ ಎಂಬುದು ಸದ್ಯದ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.





Source link

Leave a Reply

Your email address will not be published. Required fields are marked *