ಹಾಸನ, ಅಕ್ಟೋಬರ್ 30: ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಪಲ್ಟಿಯಾದ ಪರಿಣಾಮ 20 ಮಂದಿ ಮೃತಪಟ್ಟಿದ್ದಾರೆ. ಈ ಮೇಲಿನ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮ್ಯಾಕ್ಸಿ ಕ್ಯಾಬ್ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ