ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?

ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?


ಪಾಟ್ನಾ, ಏಪ್ರಿಲ್ 14: ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (ಸಾಮ್ರಾಟ್ ಚೌಧರಿ) ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ (ಏಪ್ರಿಲ್ 15) ಬೆಳಿಗ್ಗೆ 11 ಗಂಟೆಗೆ ಅವರು ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ನಡೆದ ಶಾಸಕಾಂಗ ಸಭೆಯಲ್ಲಿ ಘೋಷಣೆಯಾದ ಕೂಡಲೇ ಸಾಮ್ರಾಟ್ ಚೌಧರಿ ಅವರು ಮೊದಲ ಪ್ರತಿಕ್ರಿಯೆ ನೀಡಿದರು. ತಮ್ಮ ಮೇಲೆ ನಂಬಿಕೆ ಇರಿಸಿ ಬಿಹಾರ ಶಾಸಕಾಂಗ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್‌ಗೆ ಸಾಮ್ರಾಟ್ ಚೌಧರಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

“ನನ್ನ ಮೇಲೆ ನಂಬಿಕೆ ಇಟ್ಟು ಬಿಜೆಪಿ ಬಿಹಾರ ಶಾಸಕಾಂಗ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್‌ಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಮಾರ್ಗದರ್ಶನದಲ್ಲಿ ಬಿಹಾರವನ್ನು ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಸಮೃದ್ಧಿಯ ಹೊಸ ಆಯಾಮಗಳನ್ನು ಕೊಂಡೊಯ್ಯಲು ನಾನು ನಿರಂತರವಾಗಿ ಬದ್ಧನಾಗಿರುತ್ತೇನೆ ನಿಮ್ಮ ಪ್ರೀತಿ, ಆಶೀರ್ವಾದ ಮತ್ತು ನನ್ನ ದೊಡ್ಡ ಶಕ್ತಿ ಜೈ ಬಿಹಾರ. ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *