ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ


ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ

ಬೆಂಗಳೂರು, ಫೆಬ್ರವರಿ 04: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು (ಎಚ್.ಡಿ.ದೇವೇಗೌಡ) ಇಂದು ರಾಜ್ಯಸಭೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿದರು. ರಾಜ್ಯದ ನೀರಾವರಿ ಬಗ್ಗೆ ಪ್ರಸ್ತಾಪಿಸಿದ ಅವರು, ಕರ್ನಾಟಕವನ್ನು ರಕ್ಷಿಸಿ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಅವರ ಕಾಯಿರಿ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಪ್ರತಿಕ್ರಿಯಿಸಿ ಎಂದು ಗದ್ಗದಿತರಾದರು. ಹೆಚ್’ಡಿ ದೇವೇಗೌಡರ ಮಾತಿಗೆ ಇಡೀ ಸದನವೇ ಒಂದು ಕ್ಷಣ ಮೌನಕ್ಕೆ ಜಾರಿತ್ತು.

ರಾಜ್ಯಸಭೆಯಲ್ಲಿ ಕರ್ನಾಟಕದ ಬಗ್ಗೆ ಪ್ರಸ್ತಾಪಿಸಿದ ಹೆಚ್.ಡಿ

ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಗಂಭೀರ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಕರ್ನಾಟಕದಲ್ಲಿ ನೀರಿನ ಕುಡಿಯುವ ಸಮಸ್ಯೆಯಾಗಿದೆ. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಿಕೊಂಡರು.

ಇದನ್ನೂ ಓದಿ: ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ

‘ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು, ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ’ ಎಂದರು.

‘ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳೊಂದಿಗೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನಲ್ಲೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆ ಆಂಧ್ರ ಪ್ರದೇಶ, ಇನ್ನೊಂದು ಕಡೆ ಗೋವಾದಿಂದ ತೊಂದರೆ ಎದುರಿಸುತ್ತಿದೆ’ ಎಂದು ಹೇಳಿದರು.

ಇದನ್ನೂ ಓದಿ:

‘ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಿದೆ. ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮೊಂದಿಗೆ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ’ ಎಂದು ಹೇಳಿದ್ದಾರೆ.

ಇದೇ ವೇಳೆ ಒಪ್ಪಂದ ಹಾಗೂ ಅಮೆರಿಕದೊಂದಿಗೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಹೆಚ್.ಡಿ ದೇವೇಗೌಡರು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿಯನ್ನ ಶ್ಲಾಘಿಸಿದರು. ಈ ಬಗ್ಗೆ ತಾವು ಪತ್ರ ಬರೆದಿದ್ದಾರೆ.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ

ಇನ್ನು ಮೋದಿ ಅವರ ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ‘ಆರ್ಥಿಕವಾಗಿ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಜನರ ಆದಾಯ ಹೆಚ್ಚಾಗುತ್ತಿದೆ. ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಸಂಶಯವಿಲ್ಲ’ ಎಂದು ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *