ಬೆಂಗಳೂರು, (ಅಕ್ಟೋಬರ್ 20): ಎರಡು ದಿನ ತರಗತಿಗೆ ಬರದಿದ್ದಕ್ಕೆ ವಿದ್ಯಾರ್ಥಿಯನ್ನು ಕತ್ತಲು ರೂಮಿನಲ್ಲಿ ಕೂಡಿಹಾಕಿ ಪಿವಿಸಿ ಪೈಪ್ ನಿಂದ ಚಿತ್ರಹಿಂಸೆ ಕೊಟ್ಟಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಖಾಸಗಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕನ ಈ ಕೃತ್ಯದಿಂದ ಐದನೇ ತರಗತಿ ವಿದ್ಯಾರ್ಥಿ ಭಯಗೊಂಡು ನರಳಾಡುತ್ತಿದ್ದಾಗ, ಬಳಿಕ ಬಾಲಕ ಬಾಲಕನ ಮನೆಯಲ್ಲಿ ಕಿರುಚಾಡುತ್ತಾ ವಿಚಿತ್ರವಾಗಿ ವರ್ತಿಸುತ್ತಿದ್ದಾನೆ. ಮಗನ ಈ ಸ್ಥಿತಿ ಕಂಡು ಕಂಗಾಲಾಗಿದ್ದು, ಶಿಕ್ಷಕರ ವಿರುದ್ಧ ಆಕ್ರೋಶಗೊಂಡಿದ್ದಾರೆ.
ಸುಂಕದಕಟ್ಟೆಯಲ್ಲಿರುವ ಖಾಸಗಿ ಶಾಲೆಯಲ್ಲಿ ದಿವ್ಯ ದಂಪತಿ ಮಗ ಐದನೇ ತರಗತಿಯಲ್ಲಿ ಓದುತ್ತಿದ್ದಾನೆ.ಆದರೆ ಕಳೆದ ವಾರ ಎರಡು ದಿನ ತರಗತಿಗೆ ಹೋಗಬಾರದು ಇಷ್ಟಕ್ಕೆ ಶಾಲೆಯ ಪ್ರಾಂಶುಪಾಲರು ಮತ್ತು ಕೆಲ ಟೀಚರ್ಸ್ ಕ್ಲಾಸ್ ಬಿಟ್ಟ ನಂತರ ಕ್ಲಾಸ್ ರೂಮಿನಲ್ಲಿ ಕೂಡಿಹಾಕಿ ಪಿವಿಸಿ ಪೈಪ್ ನಿಂದ ಬಾಸುಂಡೆ ಬರುವಂತೆ ಹಲ್ಲೆ ಮಾಡಿದ್ದಾರೆ.ನಂತರ ಡಾರ್ಕ್ ರೂಮ್ ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ಕೊಟ್ಟರಂತೆ. ಈ ದೇಹದ ಕೆಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದು ಆಸ್ಪತ್ರೆಗೆ ಸೇರಿಸಿದ್ದಾರಂತೆ. ಇನ್ನು ಹಲ್ಲೆಯಾದ ನಂತರ ಮನೆಯಲ್ಲಿ ಮಗು ಒಂಥರಾ ವಿಚಿತ್ರವಾಗಿ ಕಿರುಚಾಡುತ್ತಾನೆ, ಎಂದು ಕರೆದಿದ್ದಾನೆ ಎಂದು ಆರೋಪಿಸಿದ್ದು, ಮಗುವಿನ ಸ್ಥಿತಿಗೆ ಕಂಗಾಲಾಗಿದ್ದಾರೆ.
ಇದನ್ನು ಓದಿ: ಬೆಂಗಳೂರಿನ ಜಿಟಿ ಮಾಲ್ ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು
ಇಷ್ಟೆಲ್ಲಾ ಹಲ್ಲೆ ಮಾಡಿದ ನಂತರವೂ ಶಾಲಾ ಆಡಳಿತ ಮಂಡಳಿಯವರು ಒಮ್ಮೆ ಕಾಲ್ ಮಾಡಿ ಮಗುವಿನ ಆರೋಗ್ಯ ವಿಚಾರಿಸಿಲ್ಲ. ಬದಲಾಗಿ ವಿದ್ಯಾರ್ಥಿಯೇ ಗಾಂಜಾ ಸೇವನೆ ಮಾಡುತ್ತಾನೆ ಎಂದು ತಮ್ಮ ತಪ್ಪು ಮುಚ್ಚಿಕೊಳ್ಳಲು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಹಾಗೇನಾದರೂ ನನ್ನ ಮಗ ಅಂತಹ ಕೆಲಸ ಮಾಡಿದರೆ ಮೆಡಿಕಲ್ ಮಾಡಲಿ. ತಪ್ಪು ಮಾಡಿದ್ರೆ ಶಿಕ್ಷೆ ಕೊಡಲಿ. ಅದು ಬಿಟ್ಟು ತಮ್ಮ ತಪ್ಪನ್ನು ಮುಚ್ಚಿಡಲು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಪೋಷಕರು ಆಕ್ರೋಶಗೊಂಡಿದ್ದು, ಈ ಸಂಬಂಧ ಶಾಲೆಯ ವಿರುದ್ಧ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದೀಗ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.