ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ


ಬೆಂಗಳೂರು, ಡಿಸೆಂಬರ್ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (ಕಾಲೋಚಿತ ಜ್ವರ) ಭೀತಿ ಶುರುವಾಗಿದೆ. ಈ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (ಕರ್ನಾಟಕ ಆರೋಗ್ಯ ಇಲಾಖೆ) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್ ವರೆಗೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಭೀತಿ ಹಿನ್ನಲೆಯಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಪರೀಕ್ಷೆಯ ಕಿಟ್‌ಗಳನ್ನು ಪಡೆಯುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮ್ಯಾನಿಟರಿಂಗ್‌ಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಇಂದಿನಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಇನ್ನು ಸೋಂಕಿತರ ಎಂಜಿಲಿನಿಂದ ಸೋಂಕು ಹರಡುತ್ತದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ರೋಗಿಗಳ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯವಿದೆ. ಸೀಸನಲ್ ಫ್ಲೂ ತಗುಲಿದರೆ ಆಸ್ಪತ್ರೆಗೆ ದಾಖಲಾಗುವ ಅಪಾಯವಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಸೀಸನಲ್ ಫ್ಲೂ ಲಕ್ಷಣಗಳು

ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರ ಕಾಲ ಇರಬಹುದು ಅಥವಾ ಕೆಲವೊಮ್ಮೆ 3 ವಾರಗಳ ಕಾಲ ಇರಬಹುದು.

ಆರೋಗ್ಯ ಇಲಾಖೆ ಸೂಚನೆಗಳೇನು?

  • ದಿನಕ್ಕೆ ಕನಿಷ್ಠ 5% ಐಎಲ್ಐ ಕೇಸ್, 100% ಸಾರಿ (SARI) ಕೇಸ್ ಪರೀಕ್ಷೆಗೆ ಸೂಚನೆ.
  • ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಪರೀಕ್ಷಾ ಕಿಟ್‌ಗಳನ್ನು ಇರಿಸಿಕೊಳ್ಳುವುದು
  • ಪಿಪಿಐ ಕಿಟ್‌ಗಳು, ಎನ್95 ಮಾಸ್ಕ್, ಒಸೆಲ್ಟಾಮಿವಿರ್ ಮಾತ್ರೆಗಳು ಸೇರಿದಂತೆ ಅಗತ್ಯ ಔಷಧಿಗಳ ಸಂಗ್ರಹಣೆಗೆ ಸೂಚನೆ
  • ಇನ್ಫ್ಲೂಯೆನ್ಸ್ ಲಸಿಕೆ ಶೇಖರಣೆ
  • ಹೆಲ್ತ್ ಕೇರ್ ವರ್ಕರ್ಸ್, ಗರ್ಭಿಣಿಯರು, ಹೆಚ್ಚಿನ ಅಪಾಯವಿರುವ ರೋಗಿಗಳಿಗೆ ಸೂಕ್ತ ಲಸಿಕೆ ಪಡೆಯುವಂತೆ ಸಲಹೆ
  • ಕ್ಲಿನಿಕಲ್ ಮ್ಯಾನೇಜ್ಮೆಂಟ್ ಮತ್ತು ಕ್ರಿಟಿಕಲ್ ಕೇರ್ ಸಿದ್ಧತೆ
  • ವೆಂಟಿಲೇಟರ್‌ಗಳ ಸಿದ್ಧತೆಗೆ ಸಲಹೆ
  • ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಕರೆ ನೀಡಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 7:19 am, ಭಾನುವಾರ, 21 ಡಿಸೆಂಬರ್ 25



Source link

Leave a Reply

Your email address will not be published. Required fields are marked *