ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ


ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ

ಬೆಳಗಾವಿ, ಡಿಸೆಂಬರ್ 12: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ಡಿನ್ನರ್ ಸಭೆಗಳು ಇದೀಗ ಬೆಳಗಾವಿಗೆ ವರ್ಗಾವಣೆಯಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರೊಡನೆ ಡಿನ್ನರ್ ಸಭೆ ಮಾಡಿದ ಮರುದಿನವೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತ ಬಾಣದೊಂದಿಗೆ ಬೆಳಗಾವಿಯಲ್ಲಿ ರಾತ್ರಿ ಭೋಜನ ಕೂಟ, ಸಭೆ. ಬೆಳಗಾವಿಯ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ 30ಕ್ಕೂ ಹೆಚ್ಚು ಶಾಸಕರು, ಮೂರರಿಂದ ನಾಲ್ವರು ಸಚಿವರು ಹಾಗೂ ಡಿಕೆ ಸುರೇಶ್ ಭಾಗವಹಿಸಿದ್ದರು. ಈ ಸಭೆಯ ಮುಖ್ಯ ಚರ್ಚಾ ವಿಷಯಗಳಲ್ಲಿ ಯತೀಂದ್ರ ಅವರ ಹೇಳಿಕೆಗಳಿಗೆ ಕಡಿವಾಣ ಹಾಕುವುದು ಮತ್ತು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಆಕಾಂಕ್ಷೆ ಕಾಣಿಸಿಕೊಂಡಿದೆ. ಡಿಕೆ ಶಿವಕುಮಾರ್ ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಲಿದ್ದಾರೆ, ಸಿಎಂ ಸ್ಥಾನಕ್ಕೆ ಹೇಗೆ ಹಕ್ಕು ಮಂಡಿಸಬೇಕು ಎಂಬ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಟಿವಿ9ಗೆ ಮಾಹಿತಿ ಲಭ್ಯವಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *